ಬೆಂಗಳೂರು: ನಾಳೆ ರಾಮ ಜನ್ಮಭೂಮಿಯಲ್ಲಿ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ಮಾಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನಡೆಯಲಿದೆ.
ನಾಳೆ ಮಧ್ಯಾಹ್ನ 12.30ಕ್ಕೆ ಪ್ರಧಾನಿ ನರೇಂದ್ರ ಮೋದಿ ಶಿಲಾನ್ಯಾಸ ಮಾಡುತ್ತಿದ್ದಾರೆ. ಶಿಲಾನ್ಯಾಸ ಮಾಡುವ ವೇಳೆ ರಾಜ್ಯದಲ್ಲಿರುವ ಎಲ್ಲಾ ಮುಜರಾಯಿ ದೇವಸ್ಥಾನಗಳಲ್ಲೂ ವಿಶೇಷ ಪೂಜೆ ನಡೆಸುವಂತೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಆದೇಶ ನೀಡಿದ್ದಾರೆ.
ಕೊರೊನಾ ಸೋಂಕಿನಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಎಸ್‍ವೈ, ನಾಳೆ ಪೂಜೆ ಸಲ್ಲಿಸಲು ಆದೇಶ ಹೊರಡಿಸುವಂತೆ ಸಚಿವರು ಹಾಗೂ ಅಧಿಕಾರಿಗಳಿಗೆ ದೂರವಾಣಿ ಮೂಲಕ ನಿರ್ದೇಶನ ನೀಡಿದ್ದಾರೆ.
ಮುಖ್ಯಮಂತ್ರಿಗಳ ನಿರ್ದೇಶನದ ಮೇರೆಗೆ ರಾಜ್ಯ ಧಾರ್ಮಿಕ ದತ್ತಿ ಇಲಾಖೆ, ಎಲ್ಲಾ ಮುಜರಾಯಿ ದೇವಸ್ಥಾನಗಳಿಗೆ ಸುತ್ತೋಲೆ ರವಾನಿಸಿದೆ.
ನಾಳೆ ಮುಜರಾಯಿ ವ್ಯಾಪ್ತಿಗೆ ಬರುವ ಎಲ್ಲಾ ದೇವಾಲಯಗಳಲ್ಲೂ ರಾಮಮಂದಿರಕ್ಕೆ ಶಂಕು ಸ್ಥಾಪನೆಗೆ ಶುಭವಾಗಲೆಂದು ಹಾರೈಸಿ ಪೂಜೆ ಸಲ್ಲಿಸುವಂತೆ ಸೂಚನೆ ನೀಡಿದೆ.
ನನ್ನ ಲೆವೆಲ್ ಅಶೋಕ್ ಮತ್ತು ವಿಜಯೇಂದ್ರ ಮಾತ್ರ – ಚಕ್ರವರ್ತಿ ಸೂಲಿಬೆಲೆ ನನ್ನ ಲೆವೆಲ್ ಅಲ್ಲ : ಶಾಸಕ ಪ್ರದೀಪ್ ಈಶ್ವರ್
ನಗರದಲ್ಲಿ ಗೃಹ ಇಲಾಖೆ ನಡೆಸುತ್ತಿರುವ ಗಡಿಪಾರಿನ ತಯಾರಿ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಪ್ರದೀಪ್ ಈಶ್ವರ್, ತನ್ನ ಮಾತುಗಳ ಮೂಲಕ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ನಾಂದಿ...