ತುಮಕೂರು : ಸೂರ್ಯಗ್ರಹಣ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಕುಟುಂಬದವರು ತಮ್ಮ ಮನೆದೇವರಾದ ಯಡಿಯೂರು ಸಿದ್ದಲಿಂಗೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಮುಂಜಾನೆಯಿಂದಲೇ ವಿಶೇಷ ಪೂಜೆಯಲ್ಲಿ ಸಲ್ಲಿಸಿದ್ದಾರೆ
ಯಡಿಯೂರಿಗೆ ಭೇಟಿ ನೀಡಿದ ಸಿಎಂ ಬಿಎಸ್. ಯಡಿಯೂರಪ್ಪ ಅವರ ಕುಟುಂಬ ಸದ್ಯಸರು ದೇವಸ್ಥಾನದಲ್ಲಿ ಉಳಿದು ಹಲವು ಧಾರ್ಮಿಕ ಕಾರ್ಯದಲ್ಲಿ ಭಾಗಿಯಾಗಿದ್ದಾರೆ.
ವೃಶ್ಚಿಕ ರಾಶಿಗೆ ಅಶುಭ ಫಲವೆಂದು ಶಾಂತಿಗಾಗಿ ಜೋತಿಷ್ಯರ ಸಲಹೆಯಂತೆ ಸಿಎಂ ಕಿರಿಯ ಪುತ್ರ ವಿಜಯೇಂದ್ರ ದಂಪತಿ ಹೋಮ ಹನವನದಂತಹ ವಿಶೇಷ ಪೂಜಾ ಕಾರ್ಯಕ್ರಮ ನೆರೆವೆರಿಸಿದರು. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಯಡಿಯೂರಿನಲ್ಲಿ ನಡೆದ ಪೂಜಾ ಕಾರ್ಯಕ್ರಮಗಳಲ್ಲಿ ಭಾಗಿಯಾಗಿರಲಿಲ್ಲ. ಬೆಂಗಳೂರಿನಲ್ಲಿ ಇದ್ದ ಕಾರಣಕ್ಕೆ ಯಡಿಯೂರಪ್ಪ ಅವರ ಪುತ್ರ, ಪುತ್ರಿಯರು, ಸಂಬಂಧಿಕರು ಮಾತ್ರ ಪೂಜೆಯಲ್ಲಿ ಭಾಗಿಯಾಗಿದ್ದರು.