ಮಂಡ್ಯ: ನಾಳೆ ಭೀಮನ ಅಮಾವಾಸ್ಯೆ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಆರತಿ ಉಕ್ಕಡದಲ್ಲಿ ವಿಶೇಷ ಪೂಜೆಗೆ ನಿಷೇಧ ಹೇರಲಾಗಿದೆ.

ಪ್ರತಿ ವರ್ಷ ಭೀಮನ ಅಮವಾಸ್ಯೆ ದಿನ ಆರತಿ ಉಕ್ಕಡದ ಅಹಲ್ಯ ದೇವಿ ಮಾರಮ್ಮ ದೇವಾಲಯದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನಡೆಯುತ್ತವೆ. ಪ್ರತಿ ಅಮಾವಾಸ್ಯೆ, ಭೀಮನ ಅಮಾವಾಸ್ಯೆಯಲ್ಲಿ ನಡೆಯುವ ವಿಶೇಷ ಪೂಜೆಗೆ ಸಹಸ್ರಾರು ಸಂಖ್ಯೆಯಲ್ಲಿ ಜನರು ರಾಜ್ಯದ ನಾನಾ ಮೂಲೆಗಳಿಂದ ಆಗಮಿಸುತ್ತಾರೆ. ಆದರೆ, ಈ ಬಾರಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕಟ್ಟೆ, ತಡೆ ಒಡೆಯುವುದು, ಪೂಜೆಯನ್ನು ತಾತ್ಕಾಲಿಕವಾಗಿ ನಿಷೇಧ ಹೇರಲಾಗಿದೆ.

ಭಕ್ತರ ಆರೋಗ್ಯದ ದೃಷ್ಟಿಯಿಂದ ತಾತ್ಕಾಲಿಕವಾಗಿ ಪೂಜೆ ನಿಷೇಧ ಮಾಡಲಾಗಿದೆ. ದೇವಾಲಯಕ್ಕೆ ಆಡಳಿತ ಮಂಡಳಿ ಭಕ್ತರಲ್ಲಿ ಮನವಿ ಮಾಡಿದೆ.








