ಪಾಕಿಸ್ತಾನದಲ್ಲಿ ತುರ್ತು ಭೂ ಸ್ಪರ್ಷ ಮಾಡಿದ ಸ್ಪೈಸ್ ಜೆಟ್ ವಿಮಾನ….
ದೆಹಲಿಯಿಂದ ದುಬೈಗೆ ಹೊರಟಿದ್ದ ಸ್ಪೈಸ್‌ಜೆಟ್‌ನ SG-11 ವಿಮಾನ ತಾಂತ್ರಿಕ ದೋಷದಿಂದಾಗಿ ಪಾಕಿಸ್ತಾನದ ಕರಾಚಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ಸ್ಪೈಸ್‌ಜೆಟ್ ವಕ್ತಾರು ತಿಳಿಸಿದ್ದಾರೆ.
ಸ್ಪೈಸ್‌ಜೆಟ್ ಬಿ737 ವಿಮಾನವು ಇಂಡಿಕೇಟರ್ ಲೈಟ್‌ನಲ್ಲಿ ತಾಂತ್ರಿಕ ದೋಷದಿಂದಾಗಿ ಕರಾಚಿ ಕಡೆಗೆ ತಿರುಗಿಸಲಾಗಿದೆ ಎಂದು ಹೇಳಿದ್ದಾರೆ. ವಿಮಾನ ಸುರಕ್ಷಿತವಾಗಿ ಕರಾಚಿಯಲ್ಲಿ ಲ್ಯಾಂಡ್ ಮಾಡಲಾಗಿದೆ. ಲ್ಯಾಂಡಿಂಗ್ ಸಮಯದಲ್ಲಿ ಯಾವುದೇ ತುರ್ತು ಪರಿಸ್ಥಿತಿಯನ್ನು ಘೋಷಿಸಿಲ್ಲ ಪ್ರಯಾಣಿಕರು ಕ್ಷೇಮವಾಗಿ ಇಳಿದಿದ್ದಾರೆ ಎಂದು ವಕ್ತಾರರು ತಿಳಿಸಿದ್ದಾರೆ.
ಪ್ರಯಾಣಿಕರಿಗೆ ಅನುಕೂಲವಾಗುವಂತೆ ಉಪಹಾರದ ವ್ಯವಸ್ಥೆ ಮಾಡಲಾಗಿದೆ. ಪ್ರಯಾಣಿಕರನ್ನು ದುಬೈಗೆ ಕರೆದೊಯ್ಯುವ ಮತ್ತೊಂದು ವಿಮಾನವನ್ನು ಕರಾಚಿಗೆ ಕಳುಹಿಸಲಾಗುತ್ತಿದೆ. ವಿಮಾನದಲ್ಲಿ ಒಟ್ಟು 150 ಪ್ರಯಾಣಿಕರಿದ್ದರು ಎಂದು ವಕ್ತಾರರು ತಿಳಿಸಿದ್ದಾರೆ.
ಕಳೆದ 17 ದಿನಗಳಲ್ಲಿ ಸ್ಪೈಸ್ ಜೆಟ್ ವಿಮಾನದಲ್ಲಿ ನಡೆದ ಆರನೇ ಘಟನೆ ಇದಾಗಿದೆ. ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಎಲ್ಲಾ ಆರು ಘಟನೆಗಳ ಬಗ್ಗೆ ತನಿಖೆ ನಡೆಸುತ್ತಿದೆ. ದೆಹಲಿ-ದುಬೈ ಬೋಯಿಂಗ್ 737 ಮ್ಯಾಕ್ಸ್ ವಿಮಾನ ಆಕಾಶದಲ್ಲಿದ್ದಾಗ ಎಡ ಭಾಗದ ಇಂಧನ ಟ್ಯಾಂಕ್ ಇಂಧನದ ಪ್ರಮಾಣದಲ್ಲಿ ಅಸಾಮಾನ್ಯ ರೀತಿಯಲ್ಲಿ ಕಡಿಮೆಯಾಗಿದ್ದಾಗಿ ತೋರಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದ್ದರಿಂದ, ವಿಮಾನವನ್ನು ಕರಾಚಿ ಕಡೆಗೆ ತಿರುಗಿಸಲಾಯಿತು. ಕರಾಚಿ ವಿಮಾನ ನಿಲ್ದಾಣದಲ್ಲಿ ತಪಾಸಣೆ ನಡೆಸಿದಾಗ ಎಡ ಟ್ಯಾಂಕ್‌ನಿಂದ ಯಾವುದೇ ಸೋರಿಕೆ ಕಂಡುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.