ಪಾಕ್ ನೆಲದಲ್ಲಿ ಕ್ರಿಕೆಟ್ ಆಡಲಿದೆ ಆಸ್ಟ್ರೇಲಿಯಾ..! ಟೆಸ್ಟ್ -ಏಕದಿನ ಸರಣಿಗೆ ಮಹೂರ್ತ ಫಿಕ್ಸ್..!

1 min read

ಪಾಕ್ ನೆಲದಲ್ಲಿ ಕ್ರಿಕೆಟ್ ಆಡಲಿದೆ ಆಸ್ಟ್ರೇಲಿಯಾ..! ಟೆಸ್ಟ್ -ಏಕದಿನ ಸರಣಿಗೆ ಮಹೂರ್ತ ಫಿಕ್ಸ್..!

ಟಿ-ಟ್ವೆಂಟಿ ವಿಶ್ವಕಪ್ ನಲ್ಲಿ ಪಾಕಿಸ್ತಾನ ಅದ್ಭುತವಾದ ಪ್ರದರ್ಶನವನ್ನು ನೀಡುತ್ತಿದೆ. ಇದು ಪಾಕ್ ಕ್ರಿಕೆಟ್ ಅಭಿಮಾನಿಗಳಿಗೆ ಸಕತ್ ಖುಷಿಯನ್ನುಂಟು ಮಾಡಿದೆ. ಇದರ ಬೆನ್ನಲ್ಲೇ ಪಾಕ್ ಕ್ರಿಕೆಟ್ ಅಭಿಮನಿಗಳಿಗೆ ಮತ್ತೊಂದು ಖುಷಿಯ ವಿಚಾರ ಹೊರಬಿದ್ದಿದೆ. ಹೌದು, 24 ವರ್ಷಗಳ ಬಳಿಕ ಪಾಕ್ ನೆಲದಲ್ಲಿ ಆಸ್ಟ್ರೇಲಿಯಾ ಕ್ರಿಕೆಟ್ ಆಡಲು ಮುಂದಾಗಿದೆ.

ಮುಂದಿನ ವರ್ಷ ಆಸ್ಟ್ರೇಲಿಯಾ ಕ್ರಿಕೆಟ್ ತಂಡ ಪಾಕಿಸ್ತಾನದಲ್ಲಿ ಮೂರು ಟೆಸ್ಟ್ ಪಂದ್ಯ, ಮೂರು ಏಕದಿನ ಪಂದ್ಯ ಹಾಗೂ ಏಕೈಕ ಟಿ-ಟ್ವೆಂಟಿ ಪಂದ್ಯಗಳನ್ನು ಆಡಲಿದೆ. ಈ ವಿಚಾರವಾಗಿ ಪಾಕಿಸ್ತಾನ ಕ್ರಿಕೆಟ್ ಬೋರ್ಡ್‍ನ ಮುಖ್ಯಸ್ಥ ರಮೀಝ್ ರಾಜ ಅವರು ಸಂತಸವನ್ನು ವ್ಯಕ್ತಪಡಿಸಿದ್ದಾರೆ. ಅಲ್ಲದೆ ಪಾಕ್ ಕ್ರಿಕೆಟ್ ಗಎ ಇದು ಹೊಸ ಹುರುಪನ್ನು ನೀಡಲಿದೆ ಎಂದು ಹೇಳಿದ್ದಾರೆ. ಏತನ್ಮಧ್ಯೆ, ಭದ್ರತೆಯ ಕಾರಣ ನೀಡಿ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ಕ್ರಿಕೆಟ್ ತಂಡಗಳು ಪಾಕ್ ಪ್ರವಾಸವನ್ನು ರದ್ದು ಮಾಡಿದ್ದವು.

ಆಸ್ಟ್ರೇಲಿಯಾ ಕ್ರಿಕೆಟ್ ತಂಡ 1998ರ ನಂತರ ಪಾಕ್ ನೆಲದಲ್ಲಿ ಯಾವುದೇ ಪಂದ್ಯಗಳನ್ನು ಆಡಿರಲಿಲ್ಲ. ಹಾಗೇ ವೆಸ್ಟ್ ಇಂಡೀಸ್ ತಂಡ ಇದೇ ಡಿಸೆಂಬರ್ ನಲ್ಲಿ ಮೂರು ಟಿ-ಟ್ವೆಂಟಿ ಮತ್ತು ಮೂರು ಏಕದಿನ ಪಂದ್ಯಗಳನ್ನು ಆಡಲಿದೆ,
ಮೊದಲ ಟೆಸ್ಟ್ ಪಂದ್ಯ ಕರಾಚಿಯಲ್ಲಿ ಮಾರ್ಚ್ 3ರಿಂದ 7ರವರೆಗೆ ನಡೆಯಲಿದೆ. ಎರಡನೇ ಟೆಸ್ಟ್ ಪಂದ್ಯ ರಾವಲ್ಪಿಂಡಿಯಲ್ಲಿ ಮಾರ್ಚ್ 12ರಿಂದ 16ರವರೆಗೆ ಹಾಗೂ ಮೂರನೇ ಟೆಸ್ಟ್ ಪಂದ್ಯ ಮಾರ್ಚ್ 21ರಿಂದ 25ರವರೆಗೆ ಲಾಹೋರ್ ನಲ್ಲಿ ನಡೆಯಲಿದೆ,

ಇನ್ನು ಮಾರ್ಚ್ 28, ಮಾರ್ಚ್ 31 ಮತ್ತು ಏಪ್ರಿಲ್ 2ರಂದು ಲಾಹೋರ್ ನಲ್ಲಿ ಏಕದಿನ ಪಂದ್ಯಗಳು ನಡೆಯಲಿವೆ. ಹಾಗೇ ಏಪ್ರಿಲ್ 5ರಂದು ಲಾಹೋರ್ ನಲ್ಲೇ ಏಕೈಕ ಟಿ-ಟ್ವೆಂಟಿ ಪಂದ್ಯ ನಡೆಯಲಿದೆ.
ಕೊನೆಗೂ ಪಾಕ್ ನೆಲದಲ್ಲಿ ಕ್ರಿಕೆಟ್ ಆಡುವ ಧೈರ್ಯವನ್ನು ಆಸ್ಟ್ರೇಲಿಯಾ ತಂಡ ಮಾಡಿದೆ. ಈ ಹಿಂದೆ ಆಸ್ಟ್ರೇಲಿಯಾ ತಂಡವೇ ಪಾಕ್ ನೆಲದಲ್ಲಿ ಕ್ರಿಕೆಟ್ ಪಂದ್ಯವನ್ನು ಆಡಲು ಹಿಂದೇಟು ಹಾಕಿತ್ತು ಎಂಬುದನ್ನು ಮರೆಯುವ ಹಾಗಿಲ್ಲ. ಹಾಗಾಗಿ ಕೊನೆ ಕ್ಷಣದಲ್ಲಿ ಸರಣಿಯನ್ನು ಮೊಟಕುಗೊಳಿಸುವ ಸಾಧ್ಯತೆಗಳನ್ನು ಅಲ್ಲಗಳೆಯುವಂತಿಲ್ಲ. ಯಾಕಂದ್ರೆ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ತಂಡಗಳು ಕೂಡ ಕ್ರಿಕೆಟ್ ಆಡಲು ಸಮ್ಮತಿ ಸೂಚಿಸಿ ಕೊನೆ ಕ್ಷಣದಲ್ಲಿ ಹಿಂದೇಟು ಹಾಕಿದ್ದವು.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd