ಮಂಗಳೂರು : ಕ್ರೀಡಾಪಟುವೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪುದುವೆಟ್ಟುವಿನಲ್ಲಿ ನಡೆದಿದೆ.
ಕಬಡ್ಡಿ (Kabaddi) ಆಟಗಾರನಾಗಿದ್ದ ಪುದುವೆಟ್ಟು ನಿವಾಸಿ ಸ್ವರಾಜ್ (24) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎನ್ನಲಾಗಿದೆ. ಈ ಯುವಕ, ಉಜಿರೆಯ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಕಬಡ್ಡಿಯಲ್ಲಿ ಜಿಲ್ಲಾಮಟ್ಟದ ಪ್ರಶಸ್ತಿ ಕೂಡ ಗೆದ್ದಿದ್ದ. ಆದರೆ, ಈ ಯುವಕ ಏಕಾಏಕಿ ತಮ್ಮ ಮನೆಯ ಸ್ನಾನ ಗೃಹದಲ್ಲಿ ನೇಣಿಗೆ ಶರಣಾಗಿದ್ದಾನೆ.
ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಧರ್ಮಸ್ಥಳ ಪೊಲೀಸರು ತನಿಖೆ ಕೈಗೊಂಡಿದ್ದಾರೆ.