ಸುಳ್ಳು ಸುದ್ದಿ ಹರಡಿದ ಆರೋಪ – 747 ವೆಬ್ಸೈಟ್, 94 ಯೂಟ್ಯೂಬ್ ಚಾನೆಲ್ ಬಂದ್
ಸುಳ್ಳು ಸುದ್ದಿ ಹರಡಿದ ಆರೋಪದ ಮೇಲೆ 747 ವೆಬ್ಸೈಟ್ಗಳು, 94 ಯೂಟ್ಯೂಬ್ ಚಾನೆಲ್ ಹಾಗೂ 19 ಸಾಮಾಜಿಕ ಮಾಧ್ಯಮದ ಖಾತೆಗಳನ್ನ ಕೇಂದ್ರ ಸರ್ಕಾರವು ಸರ್ಕರ ಬ್ಯಾನ್ ಮಾಡಿದೆ.
ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅನುರಾಗ್ ಠಾಕೂರ್ “ಮಾಹಿತಿ ತಂತ್ರಜ್ಞಾನ ಕಾಯ್ದೆ 2000 ರ ಸೆಕ್ಷನ್ 69 ಎ ಅಡಿಯಲ್ಲಿ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು. ದೇಶದ ಸಾರ್ವಭೌಮತೆಗೆ ಧಕ್ಕೆ ತರುವ ಪ್ರಯತ್ನ ಮಾಡಿದ್ದಕ್ಕೆ 2021-22ನೇ ಸಾಲಿನಲ್ಲಿ ನಿರ್ಬಂಧ ಹೇರಲಾಗಿದೆ ಎಂದು ಮಾಹಿತಿ ಹಾಗೂ ಪ್ರಸಾರ ಸಚಿವ ಅನುರಾಗ್ ಠಾಕೂರ್ ರಾಜ್ಯಸಭೆಗೆ ಮಾಹಿತಿ ನೀಡಿದ್ದಾರೆ.
ಕೋವಿಡ್ ಸಂಬಂಧಿತ ಸುಳ್ಳು ಸುದ್ದಿ ಹರಡುವುದನ್ನು ತಡೆಯಲು ಸತ್ಯ ಶೋಧನಾ ಘಟಕವನ್ನು 2020 ರ ಮಾರ್ಚ್ 31 ರಂದು ಸ್ಥಾಪಿಸಲಾಗಿದೆ. ಇದು 875 ಸುಳ್ಳು ಸುದ್ದಿ ಹರಡುವ ಪೋಸ್ಟ್ಗಳ ಸತ್ಯಾಂಶ ಬಯಲಿಗೆಳೆದಿದೆ ಎಂದು ಅವರು ಆರೋಪಿಸಿದ್ದಾರೆ. ಮಾಹಿತಿ ತಂತ್ರಜ್ಞಾನ ಕಾಯ್ದೆ- 2000ರ ಸೆಕ್ಷನ್ 69A ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
spreading fake news – 747 websites, 94 YouTube channels banned








