SRH vs GT | ಹೈದರಾಬಾದ್ vs ಗುಜರಾತ್ ಪ್ಲೇಯಿಂಗ್ 11
ಮುಂಬೈನ ಡಿ ವೈ ಪಾಟೀಲ್ ಅಂಗಳದಲ್ಲಿ ಇಂದು ಗುಜರಾತ್ ಟೈಟಾನ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿವೆ.
ಸನ್ರೈಸರ್ಸ್ ಹೈದರಾಬಾದ್ 2 ಅಂಕಗಳೊಂದಿಗೆ ಪಾಯಿಂಟ್ಸ್ ಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ. ತಂಡವು ಇಲ್ಲಿಯವರೆಗೆ 3 ಪಂದ್ಯಗಳನ್ನು ಆಡಿದ್ದು, 1 ಗೆದ್ದು 2 ಸೋತಿದೆ. ಹೈದರಾಬಾದ್ ತಂಡ ಕಳೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧದ ಗೆಲುವು ಸಾಧಿಸಿದೆ. ಹೀಗಾಗಿ ಇಂದಿನ ಪಂದ್ಯ ಗೆದ್ದು ಅಂಕ ಹೆಚ್ಚಿಕೊಳ್ಳುವ ತವಕದಲ್ಲಿದೆ.
ಹೈದರಾಬಾದ್ ತಂಡದ ಸಂಭವನೀಯ ತಂಡ : ಅಭಿಷೇಕ್ ಶರ್ಮಾ, ಕೇನ್ ವಿಲಿಯಮ್ಸನ್ (C), ರಾಹುಲ್ ತ್ರಿಪಾಠಿ, ಏಡೆನ್ ಮಾರ್ಕ್ರಾಮ್, ನಿಕೋಲಸ್ ಪೂರನ್ (WK), ವಾಷಿಂಗ್ಟನ್ ಸುಂದರ್, ಶಶಾಂಕ್ ಸಿಂಗ್, ಭುವನೇಶ್ವರ್ ಕುಮಾರ್, ಮಾರ್ಕೊ ಜಾನ್ಸೆನ್, ಕಾರ್ತಿಕ್ ತ್ಯಾಗಿ, ಟಿ ನಟರಾಜನ್.
ಇತ್ತ ಗುಜರಾತ್ ಟೈಟಾನ್ಸ್ ತಂಡ ಈ ಬಾರಿಯ ಐಪಿಎಲ್ ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದೆ. ಆಡಿರುವ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿ ಆರು ಅಂಕ ಪಟ್ಟಿಯಲ್ಲಿ ಆರು ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಸದ್ಯ ಭರ್ಜರಿ ಫಾರ್ಮ್ ನಲ್ಲಿರುವ ಗುಜರಾತ್ ತಂಡ ಇಂದಿನ ಪಂದ್ಯದಲ್ಲಿ ಗೆದ್ದು ಅಂಕಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರುವ ಪ್ಲಾನ್ ಮಾಡಿಕೊಂಡಿದೆ.
ಇನ್ನು ಕಳೆದ ಪಂದ್ಯದಲ್ಲಿ ಪಂಜಾಬ್ ವಿರುದ್ಧ ರಣ ರೋಚಕ ಗೆಲುವು ಸಾಧಿಸಿದ ಗುಜರಾತ್ ಟೈಟಾನ್ಸ್ ತಂಡದಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಿಕೊಳ್ಳದೇ ಕಣಕ್ಕಿಳಿಯಲಿದೆ.
ಗುಜರಾತ್ ಟೈಟಾನ್ಸ್ ತಂಡದ ಸಂಭವನೀಯ ಪ್ಲೇಯಿಂ ಗ್ ಇಲೆವೆನ್: ಮ್ಯಾಥ್ಯೂ ವೇಡ್ (ಪ), ಶುಬ್ಮನ್ ಗಿಲ್, ಸಾಯಿ ಸುದರ್ಶನ್, ಹಾರ್ದಿಕ್ ಪಾಂಡ್ಯ (ಸಿ), ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ಅಭಿನವ್ ಮನೋಹರ್, ರಶೀದ್ ಖಾನ್, ಲಾಕಿ ಫರ್ಗುಸನ್, ಮೊಹಮ್ಮದ್ ಶಮಿ, ದರ್ಶನ್ ನಲ್ಕಂಡೆ SRH vs GT IPL Fantasy Cricket Tips Playing XI