SRH vs MI Match | ಮುಂಬೈ ವರ್ಸಸ್ ಹೈದರಾಬಾದ್ ಅಂಕಿ ಅಂಶಗಳು ಏನ್ ಹೇಳುತ್ವೆ..
ಇಂಡಿಯನ್ ಪ್ರಿಮಿಯರ್ ಲೀಗ್ ನ 65 ನೇ ಪಂದ್ಯ ಒಂದು ತಂಡಕ್ಕೆ ಡು ಆರ್ ಡೈ ಮ್ಯಾಚ್ ಆದ್ರೆ, ಮತ್ತೊಂದು ತಂಡಕ್ಕೆ ಆಟಕ್ಕುಂಟು ಲೆಕ್ಕಕ್ಕೆ ಇಲ್ಲದಂತಹ ಪಂದ್ಯವಾಗಿದೆ.
ಹೌದು..!. ಮುಂಬೈನ ವಾಂಖೇಡೆ ಮೈದಾನದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಇಂದು ಮುಖಾಮುಖಿಯಾಗಲಿವೆ.
ಈ ಆವೃತ್ತಿಯಲ್ಲಿ ಅತ್ಯಂತ ಕಳಫೆ ಪ್ರದರ್ಶನ ನೀಡಿರುವ ಮುಂಬೈ ಇಂಡಿಯನ್ಸ್ ತಂಡ 12 ಪಂದ್ಯಗಳನ್ನಾಡಲಿದೆ.
ಈ ಪೈಕಿ ಮೂರು ಪಂದ್ಯಗಳಲ್ಲಿ ಗೆಲುವು, 9 ಒಂಭತ್ತು ಪಂದ್ಯಗಳಲ್ಲಿ ಸೋಲು ಕಂಡಿದೆ. ಹೀಗಾಗಿ ಅಂಕಪಟ್ಟಿಯಲ್ಲಿ ಆರು ಅಂಕಗಳೊಂದಿಗೆ ಕೊನೆಯ ಸ್ಥಾನದಲ್ಲಿದೆ.
ಇತ್ತ ಸನ್ ರೈಸರ್ಸ್ ಹೈದರಾಬಾದ್ ತಂಡ ಈ ಆವೃತ್ತಿಯಲ್ಲಿ 12 ಪಂದ್ಯಗಳನ್ನಾಡಿದ್ದು, ಐದು ಪಂದ್ಯಗಳನ್ನು ಗೆದ್ದಿದೆ. ಇದರೊಂದಿಗೆ ಅಂಕಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿದೆ.
ಇನ್ನು ಕಳೆದ ಪಂದ್ಯಗಳ ರಿಸಲ್ಟ್ ಬಗ್ಗೆ ಮಾತನಾಡೋದಾದ್ರೆ, ರೋಹಿತ್ ಬಳಕ ಕಳೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಐದು ವಿಕೆಟ್ ಗಳಿಂದ ಜಯ ಸಾಧಿಸಿದೆ.
ಈ ಪಂದ್ಯದಲ್ಲಿ ಮುಂಬೈ ಪರ ತಿಲಕ್ ವರ್ಮಾ 34 ರನ್, ಡೆನಿಯಲ್ ಸ್ಯಾಮ್ಸ್ ಮೂರು ವಿಕೆಟ್ ಪಡೆದು ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.
ಮತ್ತೊಂದು ಕಡೆ ಸನ್ ರೈಸರ್ಸ್ ಹೈದರಾಬಾದ್ ತಂಡ ಕಳೆದ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಮುಖಾಮುಖಿಯಾಗಿತ್ತು.
ಈ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ 54 ರನ್ ಗಳೊಂದಿಗೆ ಜಯ ಸಾಧಿಸಿದೆ. ಆದ್ರೆ ಪಂದ್ಯದಲ್ಲಿ ಸನ್ ರೈಸರ್ಸ್ ಪರ ಅಭಿಷೇಕ್ ಶರ್ಮಾ 43 ರನ್, ಐಡನ್ ಮಾಕ್ರಂ 32 ರನ್ ಗಳಿಸಿ ಉತ್ತಮ ಪ್ರದರ್ಶನ ನೀಡಿದ್ದರು.
ಎರಡೂ ತಂಡಗಳ ಹೆಡ್ ಟು ಹೆಡ್ ವಿಚಾರಕ್ಕೆ ಬಂದರೇ
ಮುಂಬೈ ಇಂಡಿಯನ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಇಂಡಿಯನ್ ಪ್ರಿಮಿಯರ್ ಲೀಗ್ ನಲ್ಲಿ 18 ಬಾರಿ ಮುಖಾಮುಖಿಯಾಗಿವೆ.
ಇದರಲ್ಲಿ ಮುಂಬೈ ಇಂಡಿಯನ್ಸ್ ತಂಡ ಮೇಲು ಗೈ ಸಾಧಿಸಿದೆ. ರೋಹಿತ್ ಶರ್ಮಾ ಬಳಗ 10 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೇ ಎಂಟು ಪಂದ್ಯಗಳಲ್ಲಿ ಸನ್ ರೈಸರ್ಸ್ ತಂಡ ಗೆಲುವು ಸಾಧಿಸಿದೆ.
ವಾಂಖೇಡೆ ಮೈದಾನದಲ್ಲಿ ಈ ಎರಡೂ ತಂಡಗಳು ಐದು ಬಾರಿ ಮುಖಾಮುಖಿಯಾಗಿದ್ದು, ನಾಲ್ಕು ಪಂದ್ಯಗಳಲ್ಲಿ ಮುಂಬೈ, ಒಂದು ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ ಗೆದ್ದಿದೆ.
ಇನ್ನು ಕಳೆದ ಐದು ಪಂದ್ಯಗಳ ವಿಚಾರಕ್ಕೆ ಬಂದರೇ ಇಲ್ಲೂ ಮುಂಬೈ ಇಂಡಿಯನ್ಸ್ ಉತ್ತಮ ಸಾಧನೆ ಮಾಡಿದೆ. ಕಳೆದ ಐದು ಪಂದ್ಯಗಳಲ್ಲಿ ರೋಹಿತ್ ಶರ್ಮಾ ಬಳಗ ನಾಲ್ಕು ಪಂದ್ಯಗಳಲ್ಲಿ ಜಯ ಸಾಧಿಸಿದೆ. ಒಂದು ಪಂದ್ಯದಲ್ಲಿ ಎಸ್ ಆರ್ ಹೆಚ್ ಗೆದ್ದಿದೆ.
ಕಳೆದ ಸೀಸನ್ ನಲ್ಲಿ ಮುಂಬೈ ಇಂಡಿಯನ್ಸ್ ತಂಡ ಕ್ಲೀನ್ ಸ್ವೀಪ್ ಮಾಡಿದ್ದು, ಎರಡಕ್ಕೆ ಎರಡೂ ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ.
ಇದಲ್ಲದೇ ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಆರು ಪಂದ್ಯಗಳಲ್ಲಿ, ಎಸ್ ಆರ್ ಹೆಚ್ ಮೂರು ಪಂದ್ಯಗಳಲ್ಲಿ ಗೆದ್ದಿದೆ. ಚೇಸಿಂಗ್ ಮಾಡಿದಾಗ ಮುಂಬೈ ನಾಲ್ಕು ಪಂದ್ಯಗಳಲ್ಲಿ ಸನ್ ರೈಸರ್ಸ್ ಐದು ಪಂದ್ಯಗಳಲ್ಲಿ ಗೆದ್ದಿದೆ. srh-vs-mi-match-head-to-head-records ipl 2022