SRH Vs PBKS Match | ಹೆಡ್ ಟು ಹೆಡ್ ರೆಕಾರ್ಡ್ ನಲ್ಲಿ ಯಾರು ಗ್ರೇಟ್..?
ಐಪಿಎಲ್ 15ನೇ ಆವೃತ್ತಿಯಲ್ಲಿ ಇಂದು ಲೀಗ್ ಹಂತದ ಕೊನೆಯ ಪಂದ್ಯ ನಡೆಯಲಿದೆ. ಈ ಆವೃತ್ತಿಯ ಕಟ್ಟ ಕಡೆಯ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ.
ವಾಂಖೆಡೆಯಲ್ಲಿ ನಡೆಯುವ ಪಂಜಾಬ್ ಕಿಂಗ್ಸ್ ಮತ್ತು ಸನ್ ರೈಸರ್ಸ್ ಹೈದ್ರಾಬಾದ್ ನಡುವಿನ ಪಂದ್ಯಕ್ಕೆ ಯಾವುದೇ ಮಹತ್ವ ಇಲ್ಲ. ಆದರೆ ಪ್ರತಿಷ್ಠೆ ಇದೆ.
ಯಾರು ಗೆದ್ದರೂ 6ನೇ ಸ್ಥಾನ ಫಿಕ್ಸ್..! ಈ ಪಂದ್ಯಕ್ಕೆ ಅಂಕಪಟ್ಟಿಯ ಲೆಕ್ಕಾಚಾರದಲ್ಲಿ ಮಹತ್ವವಿಲ್ಲ. ಆದರೆ ಸೋಲು, ಗೆಲುವಿನ ಲೆಕ್ಕಾಚಾರವಿದೆ.
ಹೀಗಾಗಿ ರಣತಂತ್ರವೂ ನಡೆಯುತ್ತಿದೆ. ಕೊನೆಯ ಲೀಗ್ ಪಂದ್ಯದ ಗೇಮ್ ಪ್ಲಾನ್ ಬಗ್ಗೆಯೂ ಚರ್ಚೆ ಆಗುತ್ತಿದೆ.
ಕೇನ್ ವಿಲಿಯಂ ಸನ್ ನಾಯಕತ್ವ ಸನ್ ರೈಸರ್ಸ್ ತಂಡ ಈ ಸೀಸನ್ ನಲ್ಲಿ 13 ಪಂದ್ಯಗಳನ್ನಾಡಿದೆ.
ಈ ಪೈಕಿ ಆರು ಪಂದ್ಯಗಳಲ್ಲಿ ಹೈದರಾಬಾದ್ ತಂಡ ಗೆಲುವು ಸಾಧಿಸಿದ್ದು, ಇನ್ನುಳಿದ ಪಂದ್ಯದಲ್ಲಿ ಸೋಲು ಕಂಡಿದೆ.
ಹೀಗಾಗಿ ಅಂಕಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿದೆ. ಪಂಜಾಬ್ ತಂಡ 13 ಪಂದ್ಯಗಳಲ್ಲಿ ಆರು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ.
ಕಳೆದ ಪಂದ್ಯಗಳ ರಿಸಲ್ಟ್ ಬಗ್ಗೆ ಮಾತನಾಡಿದ್ರೆ, ಹೈದರಾಬಾದ್ ತಂಡ ಕಳೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಸೆಣಸಿತ್ತು. ಈ ಪಂದ್ಯದಲ್ಲಿ ಹೈದರಾಬಾದ್ ತಂಡ ಮೂರು ರನ್ ಗಳಿಂದ ಗೆಲುವು ಸಾಧಿಸಿದೆ..
ಮತ್ತೊಂದು ಕಡೆ ಪಂಜಾಬ್ ಕಿಂಗ್ಸ್ ತಂಡ ಕಳೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ ಸೆಣಸಿದ್ದು, 17 ರನ್ ಗಳಿಂದ ಸೋಲು ಕಂಡಿದೆ.
ಇನ್ನು ಈ ಎರಡೂ ತಂಡಗಳು ಕಳೆದ ಬಾರಿ ಮುಖಾಮುಖಿಯಾಗಿದ್ದಾಗ ಸನ್ ರೈಸರ್ಸ್ ಹೈದರಾಬಾದ್ ತಂಡ ಪಂಜಾಬ್ ಕಿಂಗ್ಸ್ ತಂಡವನ್ನು ಏಳು ವಿಕೆಟ್ ಗಳಿಂದ ಸೋಲಿಸಿತ್ತು.
ಹೆಡ್ ಟು ಹೆಡ್ ರೆಕಾರ್ಡ್ ನೋಡೋದಾದ್ರೆ..
ಇಂಡಿಯನ್ ಪ್ರಿಮಿಯರ್ ಲೀಗ್ ಇತಿಹಾಸದಲ್ಲಿ ಹೈದರಾಬಾದ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು 19 ಬಾರಿ ಮುಖಾಮುಖಿಯಾಗಿವೆ. ಈ ಪೈಕಿ ಸನ್ ರೈಸರ್ಸ್ ತಂಡ ಪಂಜಾಬ್ ವಿರುದ್ಧ ಮೇಲು ಗೈ ಸಾಧಿಸಿದೆ. ಹೈದರಾಬಾದ್ ತಂಡ 13 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಆರು ಪಂದ್ಯಗಳಲ್ಲಿ ಪಂಜಾಬ್ ಕಿಂಗ್ಸ್ ಗೆಲುವು ಸಾಧಿಸಿದೆ.
ಕಳೆದ ಐದು ಪಂದ್ಯಗಳ ವಿಚಾರಕ್ಕೆ ಬಂದರೇ ಸಮಬಲದ ಹೋರಾಟ ಕಾಣಿಸಿಕೊಂಡಿದೆ. ಸನ್ ರೈಸರ್ಸ್ ಹೈದರಾಬಾದ್ ಮೂರು ಪಂದ್ಯಗಳಲ್ಲಿ ಗೆದ್ದರೇ ಪಂಜಾಬ್ ಕಿಂಗ್ಸ್ ತಂಡ ಎರಡು ಪಂದ್ಯಗಳಲ್ಲಿ ಗೆದ್ದಿದೆ. ಈ ಸೀಸನ್ ನಲ್ಲಿ ಆಡಿದ ಮೊದಲ ಪಂದ್ಯದಲ್ಲಿ ಹೈದರಾಬಾದ್ ತಂಡ ಜಯ ಸಾಧಿಸಿದೆ.
ಗೆಲುವಿನ ಲೆಕ್ಕಚಾರದಲ್ಲಿ ಮೊದಲ ಬ್ಯಾಟಿಂಗ್ ಮತ್ತು ಸೆಕೆಂಡ್ ಬ್ಯಾಟಿಂಗ್ ಮಾಡಿದಾಗ ಎರಡೂ ತಂಡಗಳ ಪ್ರದರ್ಶನ ನೋಡೋದಾದ್ರೆ, ಮೊದಲು ಬ್ಯಾಟಿಂಗ್ ಮಾಡಿದಾಗ ಹೈದರಬಾದ್ ತಂಡ ಎಂಟು ಪಂದ್ಯಗಳಲ್ಲಿ ಗೆದ್ದಿದೆ. ಪಂಜಾಬ್ ಕಿಂಗ್ಸ್ ನಾಲ್ಕು ಪಂದ್ಯದಲ್ಲಿ ಜಯ ಸಾಧಿಸಿದೆ. ಸೆಕೆಂಡ್ ಬ್ಯಾಟಿಂಗ್ ಮಾಡಿದಾಗ ಐದು ಪಂದ್ಯದಲ್ಲಿ ಹೈದರಾಬಾದ್ ತಂಡ, ಎರಡು ಪಂದ್ಯಗಳಲ್ಲಿ ಪಂಜಾಬ್ ಜಯ ಸಾಧಿಸಿದೆ. srh-vs-pbks-match-head to head record