ಕೆಕೆಆರ್ vs ಹೈದರಾಬಾದ್ ತಂಡ ಹೆಡ್ ಟು ಹೆಡ್ ರೆಕಾರ್ಡ್
15ನೇ ಆ ಇಂಡಿಯನ್ ಪ್ರಿಮಿಯರ್ ಲೀಗ್ ನ 25ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿವೆ. ಮುಂಬೈನ ಬ್ರೆಬೋರ್ನ್ ಮೈದಾನದಲ್ಲಿ ಇಂದಿನ ಪಂದ್ಯ ನಡೆಯಲಿದೆ.
ಸನ್ ರೈಸರ್ಸ್ ಹೈದರಾಬಾದ್ ತಂಡ ಸದ್ಯ ಅಂಕ ಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿದೆ. ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ.
ಸನ್ ರೈಸರ್ಸ್ ಹೈದರಾಬಾದ್ ತಂಡ ಈ ಸೀಸನ್ ನಲ್ಲಿ ಆಡಿರುವ ನಾಲ್ಕು ಪಂದ್ಯಗಳಲ್ಲಿ 2 ಪಂದ್ಯಗಳನ್ನು ಗೆದ್ದು 2 ಪಂದ್ಯಗಳನ್ನ ಸೋತಿದೆ. ಇತ್ತ ಕೊಲ್ಕತಾ ನೈಟ್ ರೈಸರ್ಸ್ ತಂಡ ಐದು ಪಂದ್ಯಗಳನ್ನಾಡಿದ್ದು, 3 ಪಂದ್ಯಗಳನ್ನು ಗೆದ್ದುಕೊಂಡು 2 ಪಂದ್ಯಗಳನ್ನ ಸೋತಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಉಭಯ ತಂಡಗಳಿಗೂ ಗೆಲುವು ಅನಿವಾರ್ಯವಾಗಿದೆ.
ಕಳೆದ ಪಂದ್ಯದಲ್ಲಿ ಹೈದರಾಬಾದ್ ತಂಡ ಗುಜರಾತ್ ಟೈಟಾನ್ಸ್ ವಿರುದ್ಧ ಎಂಟು ವಿಕೆಟ್ ಗಳ ಗೆಲುವು ಸಾಧಿಸಿತ್ತು. ಕೊಲ್ಕತ್ತಾ ನೈಟ್ ರೈಸರ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 44 ರನ್ ಗಳಿಂದ ಸೋಲು ಕಂಡಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಗೆಲುವಿನ ಟ್ರ್ಯಾಕ್ ಮರಳಲು ಕೆಕೆಆರ್ ಪ್ಲಾನ್ ಮಾಡಿಕೊಂಡಿದೆ.
ಉಭಯ ತಂಡಗಳ ಹೆಡ್ ಟು ಹೆಡ್ ರೆಕಾರ್ಡ್ ವಿಚಾರಕ್ಕೆ ಬಂದರೇ
ಇಂಡಿಯನ್ ಪ್ರಿಮಿಯರ್ ಲೀಗ್ ಇತಿಹಾಸದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡ ಈ ವರೆಗೂ 21 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಪ್ರಾಬಲ್ಯ ಸಾಧಿಸಿದೆ. ಕೆಕೆಆರ್ ತಂಡ 14 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೇ ಸನ್ ರೈಸರ್ಸ್ ಹೈದರಾಬಾದ್ ತಂಡ 7 ಬಾರಿ ಮಾತ್ರ ಕೆಕೆಆರ್ ತಂಡವನ್ನು ಮಣಿಸಿದೆ.
ಇನ್ನು ಕಳೆದ ಐದು ಪಂದ್ಯಗಳಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ನಾಲ್ಕು ಪಂದ್ಯಗಳನ್ನು ಗೆದ್ದುಕೊಂಡಿದ್ದು, ಸನ್ ರೈಸರ್ಸ್ ಹೈದರಾಬಾದ್ ತಂಡ 1 ಪಂದ್ಯದಲ್ಲಿ ಗೆಲುವು ಸಾಧಿಸಿದೆ.
ಅಂಕ ಅಂಶಗಳು ಕೊಲ್ಕತ್ತಾ ನೈಟ್ ರೈಸರ್ಸ್ ಪರವಾಗಿದ್ದರೂ ಆ ದಿನ ಯಾವ ತಂಡ ಅದ್ಭುತವಾಗಿ ಆಡುತ್ತೋ ಆ ತಂಡ ಗೆಲುವು ಸಾಧಿಸುತ್ತದೆ. ಅದರಂತೆ ಇಂದಿನ ಪಂದ್ಯದಲ್ಲಿಯೂ ಕೂಡ ಕೊಲ್ಕತ್ತಾ ನೈಟ್ ರೈಡರ್ಸ್ ಗೆದ್ದು ಅಂಕಪಟ್ಟಿಯಲ್ಲಿ ಮೇಲೆರುವ ತವಕದಲ್ಲಿದೆ. ಇತ್ತ ಸನ್ ರೈಸರ್ಸ್ ಹೈದರಾಬಾದ್ ತಂಡ ಹ್ಯಾಟ್ರಿಕ್ ಗೆಲುವಿನ ತವಕದಲ್ಲಿದೆ. ಈಗ ನಾಲ್ಕು ಪಂದ್ಯಗಳನ್ನು ಗೆದ್ದಿರುವ ಹೈದರಾಬಾದ್ ತಂಡ, ಈ ಪಂದ್ಯ ಗೆದ್ದು ಅಂಕಪಟ್ಟಿಯಲ್ಲಿ ಮೇಲೆರಲು ಪ್ಲಾನ್ ಮಾಡಿಕೊಂಡಿದೆ. SRH Head-to-Head Record Against KKR