ಮಂಗಳೂರು : ರಾಜ್ಯಾದ್ಯಂತ ಸೋಮವಾರದಿಂದ ದೇವಸ್ಥಾನದ ಬಾಗಿಲು ಓಪನ್ ಆಗಲಿವೆ. ಆ ಹಿನ್ನೆಲೆಯಲ್ಲಿ ಬಾಗಿಲು ತೆರೆಯಲು ಶ್ರೀ ಕ್ಷೇತ್ರ ಧರ್ಮಸ್ಥಳ ದಲ್ಲೂ ಸಂಪೂರ್ಣ ತಯಾರಿ ನಡೆದಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ, ಈಗ 800 ರಿಂದ ಸಾವಿರ ಮಂದಿಗೆ ದರ್ಶನಕ್ಕೆ ಅವಕಾಶ ಮಾಡಿಕೊಡುತ್ತಿದ್ದೇವೆ. ಭಕ್ತರ ಆಧಾರ್ ಕಾರ್ಡ್ ಮಾಹಿತಿಯನ್ನು ದಾಖಲಿಸಿದ್ದೇವೆ. ಭಕ್ತರ ಟೆಂಪರೇಚರ್ ನೋಡಿ ಸ್ಯಾನಿಟೈಸರ್ ಹಾಕಿ ದರ್ಶನಕ್ಕೆ ಅವಕಾಶ ಮಾಡುತ್ತಿದ್ದೇವೆ. ಸಿಬ್ಬಂದಿ ಗಳು ಪೇಸ್ ಶೀಲ್ಟ್, ಗ್ಲೌಸ್ ಹಾಕುತ್ತಾರೆ. ಸೋಮವಾರದಿಂದ ಎಲ್ಲರಿಗೂ ದರ್ಶನಕ್ಕೆ ಅವಕಾಶ ಮಾಡಿಕೊಡುತ್ತೇವೆ. ಎಲ್ಲಾ ಹರಕೆ ಸೇವೆಗಳೂ ನಿರಂತರ ನಡೆಯುತ್ತದೆ.
ಅನ್ನಪೂರ್ಣ ಅನ್ನಛತ್ರದಲ್ಲಿ ನಿತ್ಯ ಅನ್ನದಾನ ಇರುತ್ತದೆ. ಬಫೆ ಸಿಸ್ಟಮ್ ನಲ್ಲಿ ಈ ಹಿಂದೆ ಅನ್ನ ದಾನ ವಾಗುತಿತ್ತು. ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ದೃಷ್ಟಿಯಿಂದ ಕೂತು ಊಟ ಮಾಡುವ ವ್ಯವಸ್ಥೆ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.