Sri Ramulu | ಭಾರತ್ ತೋಡೋ ಯಾತ್ರೆಗೆ ಹಾರ್ದಿಕ ಸುಸ್ವಾಗತ – ರಾಮುಲು ವ್ಯಂಗ್ಯ
ಬಳ್ಳಾರಿ : ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಬಳ್ಳಾರಿಗೆ ಎಂಟ್ರಿ ಕೊಟ್ಟಿದ್ದು, ಸಚಿವ ಬಿ.ಶ್ರೀರಾಮುಲು ಟ್ವಿಟ್ಟರ್ ನಲ್ಲಿ ಕಿಡಿಕಾರಿದ್ದಾರೆ.
ರಾಮುಲು ಟ್ವಿಟ್ಟರ್ ನಲ್ಲಿ..
1999 ರ ಲೋಕಸಭಾ ಚುನಾವಣೆ ವೇಳೆ ಅಮೇಥಿಯಲ್ಲಿ ಸೋಲಬಹುದು ಎಂಬ ಭೀತಿಯಿಂದ ಬಳ್ಳಾರಿಗೆ ಓಡೋಡಿ ಬಂದು ರಾಜಕೀಯ ಪುನರ್ ಜನ್ಮ ಪಡೆದಿದ್ದಕ್ಕೆ ಪ್ರತಿಯಾಗಿ, ಜಿಲ್ಲೆಯ ಜನತೆಗೆ ಚೂರಿ ಹಾಕಿ ಹೋಗಿದ್ದ ಕಾಂಗ್ರೆಸ್ ಪಕ್ಷದ ಭಾರತ್ ತೋಡೋ ಯಾತ್ರೆಗೆ ಹಾರ್ದಿಕ ಸುಸ್ವಾಗತ!
ಲೋಕಸಭಾ ಚುನಾವಣೆಯಲ್ಲಿ ಬಳ್ಳಾರಿ ಕ್ಷೇತ್ರದಿಂದ ಗೆದ್ದು, ಸೌಜನ್ಯಕ್ಕಾದರೂ ಜನತೆಗೆ ಧನ್ಯವಾದಗಳನ್ನು ತಿಳಿಸದೇ, ದೆಹಲಿಯಿಂದಲೇ ರಾಜೀನಾಮೆ ಪತ್ರ ಬಿಸಾಕಿದ ಖಾಯಂ ಎಐಸಿಸಿ AICC ಅಧ್ಯಕ್ಷರ ಮುದ್ದಿನ ಪುತ್ರ ಪಾದಯಾತ್ರೆಯ ಮೂಲಕ ಬಳ್ಳಾರಿಗೆ ಆಗಮಿಸುತ್ತಿರುವುದಕ್ಕೆ ನಿಮಗಿದೋ ಭವ್ಯ ಸ್ವಾಗತ.

ತಮ್ಮ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು ಏದುಸಿರು ಬಿಡುತ್ತಾ ಕೈಲಾಗದಿದ್ದರೂ ಎದ್ದೋ ಬಿದ್ದನಂತೆ ಓಡುತ್ತಾ, ರಸ್ತೆಯಲ್ಲಿ ಬಸ್ಕಿ ಹೊಡೆಯುತ್ತಾ, ಹಾವು- ಮುಂಗುಸಿಯಂತೆ ಇದ್ದರೂ, ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ ಎಂದು ಕ್ಯಾಮರಾ ಮುಂದೆ ಪೋಜು ನೀಡುವ ಕೆಪಿಸಿಸಿ ಮಹಾನ್ ನಾಯಕರೆಲ್ಲರಿಗೂ ಸುಸ್ವಾಗತ ಎಂದು ವ್ಯಂಗ್ಯವಾಡಿದ್ದಾರೆ.
ನಾವು ನಡೆಸುತ್ತಿರುವುದು ಭಾರತ್ ಜೋಡೋ ಯಾತ್ರೆಯಲ್ಲ. ಬದಲಿಗೆ ನಮ್ಮ ತಾಯಿಯನ್ನು ಗೆಲ್ಲಿಸಿದ್ದಕ್ಕೆ ಜನಾದೇಶವನ್ನು ದಿಕ್ಕರಿಸಿ ರಾಜೀನಾಮೆ ನೀಡಿದ್ದಕ್ಕೆ, ಅಧಿಕಾರದಲ್ಲಿ ಇದ್ದಾಗ ಏನು ಮಾಡದೆ ಮತದಾರರ ಕ್ಷಮೆ ಕೇಳುವ ಪ್ರಾಯಶ್ಚಿತ ಯಾತ್ರೆ ಮಾಡುತ್ತಿದ್ದೇವೆ ಎಂದು ಹೇಳಲು ಸಂಕೋಚ ಏಕೆ ಎಂದು ರಾಮುಲು ಕುಟುಕಿದ್ದಾರೆ.
1999 ರ ಲೋಕಸಭಾ ಚುನಾವಣೆ ವೇಳೆ ಅಮೇಥಿಯಲ್ಲಿ ಸೋಲಬಹುದು ಎಂಬ ಭೀತಿಯಿಂದ ಬಳ್ಳಾರಿಗೆ ಓಡೋಡಿ ಬಂದು ರಾಜಕೀಯ ಪುನರ್ ಜನ್ಮ ಪಡೆದಿದ್ದಕ್ಕೆ ಪ್ರತಿಯಾಗಿ, ಜಿಲ್ಲೆಯ ಜನತೆಗೆ ಚೂರಿ ಹಾಕಿ ಹೋಗಿದ್ದ ಕಾಂಗ್ರೆಸ್ ಪಕ್ಷದ ಭಾರತ್ ತೋಡೋ ಯಾತ್ರೆಗೆ ಹಾರ್ದಿಕ ಸುಸ್ವಾಗತ! 1/14
— B Sriramulu (@sriramulubjp) October 15, 2022
1999ರ ಲೋಕಸಭಾ ಚುನಾವಣೆ ನಂತರ ಬಳ್ಳಾರಿ ಜಿಲ್ಲೆಗೆ 3300 ಕೋಟಿ ರೂ.ಗಳ ಸುಳ್ಳು ಪ್ಯಾಕೇಜ್ ಅನ್ನು ನಿಮ್ಮ ಮಾತೃಶ್ರೀಯವರಾದ ಶ್ರೀಮತಿ ಸೋನಿಯಾ ಗಾಂಧಿಯವರು ಘೋಷಣೆ ಮಾಡಿದ್ದರು ಎಂಬುದನ್ನು ಮಾನ್ಯ ರಾಹುಲ್ ಗಾಂಧಿ ಅವರಿಗೆ ನೆನಪಿಲು ಇಚ್ಛೇಸುತ್ತೇನೆ ಎಂದು ರಾಮುಲು ಬರೆದುಕೊಂಡಿದ್ದಾರೆ.








