Siddeshwara Swamiji: ಜ್ಞಾನಯೋಗಾಶ್ರಮದ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಲಿಂಗೈಕ್ಯ…
ಕರುನಾಡಿನ ಪ್ರಸಿದ್ಧ ವಾಗ್ಮಿ, ಉಪನ್ಯಾಸಕ, ಅಂಕಣಕಾರ, ಸಂತರು, ಅನನ್ಯ ಜ್ಞಾನಯೋಗಿ ಆಗಿರುವ ವಿಜಯಪುರ ಜ್ಞಾನಯೋಗಾಶ್ರಮದ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಹಲವು ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ದೈವೈಕ್ಯರಾದರು . ಅವರಿಗೆ 82 ವರುಷ ವಯಸ್ಸಾಗಿತ್ತು.
ಅಪಾರ ಭಕ್ತ ಜನರನ್ನು ಹೊಂದಿದ ಇವರು ನಡೆದಾಡುವ ದೇವರು, ಎರಡನೇ ವಿವೇಕಾನಂದ ಎಂದು ಮನೆ ಮಾತಾಗಿದ್ದರು.
ವಿಜಯಪುರ ಜಿಲ್ಲೆಯ ತಿಕೋಟಾ ತಾಲ್ಲೂಕಿನ ಬಿಜ್ಜರಗಿ ಗ್ರಾಮದ ಸಾಮಾನ್ಯ ರೈತ ಕುಟುಂಬದಲ್ಲಿ 1941 ಅಕ್ಟೋಬರ್ 24 ರಂದು ಜನಿಸಿದ್ದರು. ಸಿದ್ದಗೊಂಡಪ್ಪ ಇವರ ಬಾಲ್ಯದ ಹೆಸರು. ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಪದವಿ ನಂತರ ಕೊಲ್ಹಾಪುರ ವಿಶ್ವವಿದ್ಯಾನಿಲಯದಿಂದ ತತ್ವಶಾಸ್ತ ವಿಷಯದಲ್ಲಿ ಎಂ.ಎ ಸ್ನಾತಕೋತ್ತರ ಪದವಿಯನ್ನು ಪಡೆದರು .
ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಅವರು 14 ನೇ ವಯಸ್ಸಿನಲ್ಲಿ ಗದಗಿನ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿಯವರ ಶಿಷ್ಯರಾಗಿ ಸೇರಿ ಆಧ್ಯಾತ್ಮಿಕತೆಯ ಕಡೆಗೆ ವಾಲಿದ್ದರು. ಗುರುಗಳ ಬಳಿಯೇ ಇದ್ದುಕೊಂಡು ತಮ್ಮ ವಿದ್ಯಾಭ್ಯಾಸವನ್ನೆಲ್ಲ ಮುಗಿಸಿದರು.ಸ್ವಾಮಿಜಿಯು ದೈವಭಕ್ತಿ ಎಂಬ ನೈಜ ಮತ್ತು ನೇರ ನುಡಿಗಳಿಗೆ ಸಾಕ್ಷಿಯಾಗಿದ್ದಾರೆ.
ಬದುಕುವುದು ಹೇಗೆ?
ಸಾಮಾನ್ಯ ಮನುಷ್ಯರು ‘ಬದುಕುವುದು ಹೇಗೆ?’ ಹೇಗೆ ಬದುಕಬೇಕು, ಜೀವನಕ್ಕೆ ದಾರಿ ಮಾಡಿಕೊಳ್ಳಬೇಕು ಎಂದು ಮಾಡುತ್ತಿದ್ದ ಉಪನ್ಯಾಸಗಳು ಲಕ್ಷಾಂತರ ಜನರ ಜೀವನವನ್ನು ಬದಲಾಯಿಸಿದೆ. ತಮಗೆ ಸಂದ ಎಷ್ಟೋ ಪ್ರಶಸ್ತಿ ಮತ್ತು ಪುರಸ್ಕಾರಗಳನ್ನು ವಿನಮ್ರವಾಗಿಯೇ ನಿರಾಕರಿಸಿದ್ದಾರೆ.
ವಿಲ್…
ಕಾಯವನ್ನು ಮಣ್ಣು ಮಾಡುವಂತಿಲ್ಲ, ಅಗ್ನಿ ಸ್ಪರ್ಷ ಮಾಡಬೇಕು. ಚಿತಾಭಸ್ಮವನ್ನು ನದಿ ಅಥವಾ ಸಮುದ್ರದಲ್ಲಿ ವಿಸರ್ಜಿಸಿ ಬೇಕು. ಶ್ರಾದ್ಧ ಕರ್ಮ ಕರ್ಮಗಳನ್ನು ಮಾಡುವಂತಿಲ್ಲ. ಯಾವುದೇ ರೀತಿಯ ಸ್ಮಾರಕಗಳನ್ನು ನಿರ್ಮಿಸಬೇಡಿ ಅಂತ ಸಿದ್ಧೇಶ್ವರ ಸ್ವಾಮೀಜಿಗಳು ಆಪ್ತರೊಂದಿಗೆ ಚರ್ಚೆ ನಡೆಸಿ ವಿಲ್ ಬರೆದಿಟ್ಟಿದ್ದಾರೆ
ಅಂತಿಮ ಸಂದೇಶ:
ಸತ್ಯವೂ ಇಲ್ಲ ಅಸತ್ಯವೂ ಇಲ್ಲ. ಸಹಜವೂ ಇಲ್ಲ ಅಸಹಜವೂ ಇಲ್ಲ. ನಾನು ಇಲ್ಲ, ನೀನು ಇಲ್ಲ. ಇಲ್ಲ ಇಲ್ಲ ಎಂಬುವುದು ತಾನಿಲ್ಲ. ಗುಹೇಶ್ವರನೆಂಬುದು ತಾ ಬಯಲು ಅಂತ್ಯಃ ಪ್ರಮಾಂಜಲಿ ಹೀ, ಸ್ವಾಮಿ ಸಿದ್ದೇಶ್ವರ.
Sri Siddeshwara Swamiji no more