Shree Lanka:ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ | ಅಧ್ಯಕ್ಷರ ವಿರುದ್ಧ ತಿರುಗಿ ಬಿದ್ದ ಜನ

1 min read
Shrilanka Saaksha Tv

ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ | ಅಧ್ಯಕ್ಷರ ವಿರುದ್ಧ ತಿರುಗಿ ಬಿದ್ದ ಜನ

ಶ್ರೀಲಂಕಾ: ದೇಶದವು ಆರ್ಥಿಕವಾಗಿ ಸಂಪೂರ್ಣ ಕುಸಿದು ಹೋಗಿದ್ದು, ಸರಕಾರದ ವಿರುದ್ಧ ಜನರು ಪ್ರತಿಭನೆ ಮಾಡುತ್ತಿದ್ದು, ಜನರನ್ನು ನಿಯಂತ್ರಿಸಲು ಸರಕಾರ ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ.

ತುರ್ತು ಪರಿಸ್ಥಿತಿ ವಿಧಿಸಿ ಮಾತನಾಡಿದ ಅಧ್ಯಕ್ಷ ಗೊಟಬಾಯ ರಾಜಪಕ್ಸ ಸಮಾಜದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ತುರ್ತು ಪರಿಸ್ಥಿತಿ ವಿಧಿಸಲಾಗಿದೆ. ಅಗತ್ಯವಸ್ತುಗಳ ಪೂರೈಕೆ ಸರಪಳಿಯನ್ನು ಕಾಪಾಡಿಕೊಳ್ಳಲು, ಜನರ ಪ್ರಾಣ ಮತ್ತು ಆಸ್ತಿಯನ್ನು ರಕ್ಷಿಸಲು ಭದ್ರತಾ ಪಡೆಗಳು ಅಗತ್ಯ ಕ್ರಮ ತೆಗೆದುಕೊಳ್ಳಲಿವೆ ಎಂದು ಹೇಳಿದರು.

ಅಧ್ಯಕ್ಷರ ವಿರುದ್ಧ ಪ್ರತಿಭಟಿಸುತ್ತಿರುವ ಜನರು ರಾಜಪಕ್ಸ ಕುಟುಂಬ ಅಧಿಕಾರದಿಂದ ದೂರ ಸರಿಯಬೇಕು ‘ಭ್ರಷ್ಟಾಚಾರ ಸಾಕು, ಮನೆಗೆ ಹೋಗು ಗೋಟ’ ಎಂಬರ್ಥದ ಭಿತ್ತಿಪತ್ರಗಳನ್ನು ಪ್ರದರ್ಶಿಸಿ, ದೇಶಾದ್ಯಂತ ಪ್ರತಿಭಟಿಸುತ್ತಿದ್ದಾರೆ.ಈ ಪ್ರತಿಭಟನೆಗಳು ದಕ್ಷಿಣ ಶ್ರೀಲಂಕಾದ ಗಲ್ಲೆ, ಮತಾರಾ ಮತ್ತು ಮೊರಟುವಾ ಪಟ್ಟಣಗಳಲ್ಲಿಯೂ ಪ್ರತಿಭಟನೆ ತೀವ್ರಗೊಂಡಿದೆ. ರಸ್ತೆತಡೆಗಳು ಸಾಮಾನ್ಯ ವಿದ್ಯಮಾನ ಎನಿಸಿದೆ. ಅಧ್ಯಕ್ಷರ ಖಾಸಗಿ ನಿವಾಸದ ಎದುರೂ ಜನರು ದೊಡ್ಡಸಂಖ್ಯೆಯಲ್ಲಿ ನೆರೆದಿದ್ದು, ರಾಜೀನಾಮೆ ಕೊಟ್ಟು ಮನೆಗೆ ಹೋಗಿ ಎಂದು ಆಗ್ರಹಿಸುತ್ತಿದ್ದಾರೆ.

ಅಲ್ಲದೇ ಪೆಟ್ರೋಲ್ ಬಂಕ್​ಗಳ ಎದುರು ಜನರು ದೊಡ್ಡ ಸಂಖ್ಯೆಯಲ್ಲಿ ಪಾಳಿಗಳಲ್ಲಿ ನಿಲ್ಲುತ್ತಿರುವ ಕಾರಣ ಸರ್ಕಾರ ಮಿಲಿಟರಿ ನಿಯೋಜಿಸಿದೆ. ಮಿಲಿಟರಿ ಮತ್ತು ಪೊಲೀಸ್ ಸಿಬ್ಬಂದಿಯೊಂದಿಗೆ ಜನರು ಘರ್ಷಣೆಗೆ ಇಳಿಯುತ್ತಿದ್ದಾರೆ. ಭದ್ರತಾ ಪಡೆಗಳ ವಾಹನಗಳನ್ನು ಸುಟ್ಟುಹಾಕುತ್ತಿದ್ದಾರೆ. ಶ್ರೀಲಂಕಾದ ಪರಿಸ್ಥಿತಿ ಅಷ್ಟೇನೂ ಹದಗೆಟ್ಟಿಲ್ಲ ಎಂದು ಬಿಂಬಿಸಲು ಯತ್ನಿಸುತ್ತಿರುವ ಅಲ್ಲಿನ ಪೊಲೀಸರು ಸ್ಥಳೀಯ ಮಾಧ್ಯಮ ಪ್ರತಿನಿಧಿಗಳನ್ನು ಹತ್ತಿಕ್ಕುತ್ತಿದ್ದಾರೆ.

Leave a Reply

Your email address will not be published.

YOU MUST READ

Copyright © All rights reserved | SaakshaTV | JustInit DigiTech Pvt Ltd