ಲಂಕಾ ವಿರುದ್ಧ ಸರಣಿಗೆ ಶಿಖರ್ ಧವನ್ ನಾಯಕ… ಭುವಿ ಉಪನಾಯಕ..!
ಮುಂಬರುವ ಶ್ರೀಲಂಕಾ ವಿರುದ್ಧದ ಏಕದಿನ ಮತ್ತು ಟಿ-ಟ್ವೆಂಟಿ ಸರಣಿಗಳಿಗೆ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ.
ಟೀಮ್ ಇಂಡಿಯಾವನ್ನು ಆರಂಭಿಕ ಬ್ಯಾಟ್ಸ್ ಮೆನ್ ಶಿಖರ್ ಧವನ್ ಅವರು ಮುನ್ನಡೆಸಲಿದ್ದಾರೆ. ಭುವನೇಶ್ವರ್ ಕುಮಾರ್ ಅವರು ಉಪನಾಯಕನಾಗಿ ಆಯ್ಕೆಯಾಗಿದ್ದಾರೆ.
ಈ ಟೂರ್ನಿಯಲ್ಲಿ ಟೀಮ್ ಇಂಡಿಯಾದ ಎರಡನೇ ತಂಡವಾಡುತ್ತಿದೆ. ಇದೇ ವೇಳೆ ವಿರಾಟ್ ಕೊಹ್ಲಿ ಬಳಗ ಇಂಗ್ಲೆಂಡ್ ನಲ್ಲಿ ಟೆಸ್ಟ್ ಸರಣಿಗೆ ರೆಡಿಯಾಗುತ್ತಿದೆ. ಇನ್ನೊಂದೆಡೆ ಮತ್ತೊಂದು ತಂಡವಾಗಿರುವ ಟೀಮ್ ಇಂಡಿಯಾ ಲಂಕಾ ವಿರುದ್ಧ ಮೂರು ಏಕದಿನ ಮತ್ತು ಮೂರು ಟಿ-ಟ್ವೆಂಟಿ ಪಂದ್ಯಗಳನ್ನಾಡಲಿದೆ.
ಎಲ್ಲಾ ಪಂದ್ಯಗಳು ಕೋವಿಡ್ ಮಾರ್ಗಸೂಚಿಯಂತೆ ನಡೆಯಲಿದೆ. ಶ್ರೀಲಂಕಾದ ಪ್ರೇಮದಾಸ ಮೈದಾನದಲ್ಲಿ ಎಲ್ಲಾ ಪಂದ್ಯಗಳು ನಡೆಯಲಿವೆ. ಜುಲೈ 13ರಿಂದ ಜುಲೈ 13ರಿಂದ ಏಕದಿನ ಸರಣಿ ನಡೆದ್ರೆ, ಜುಲೈ 21ರಿಂದ ಟಿ-ಟ್ವೆಂಟಿ ಪಂದ್ಯಗಳು ನಡೆಯಲಿವೆ.
ತಂಡದಲ್ಲಿ ಪೃಥ್ವಿ ಶಾ, ದೇವದತ್ ಪಡಿಕ್ಕಲ್, ರುತುರಾಜ್ ಗಾಯಕ್ವಾಡ್ ಸೇರಿಕೊಂಡಿದ್ದಾರೆ. ಹಾಗೇ ಈ ತಂಡದಲ್ಲಿ ನಾಲ್ವರು ಕನ್ನಡಿಗರು ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ದೇವದತ್ ಪಡಿಕ್ಕಲ್, ಮನೀಶ್ ಪಾಂಡೆ, ಕೆ. ಗೌತಮ್ ಹಾಗೂ ಬೀದರ್ ಮೂಲದ ವರುಣ್ ಚಕ್ರವರ್ತಿ ಅವರು ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.
ಲಂಕಾ ಪ್ರವಾಸಕ್ಕೆ ಟೀಮ್ ಇಂಡಿಯಾ
ಶಿಖರ್ ಧವನ್ (ನಾಯಕ), ಪೃಥ್ವಿ ಶಾ, ದೇವದತ್ ಪಡಿಕ್ಕಲ್, ರುತುರಾಜ್ ಗಾಯಕ್ವಾಡ್, ಸೂರ್ಯಕುಮಾರ್ ಯಾದವ್, ಮನೀಷ್ ಪಾಂಡೆ, ಹಾರ್ದಿಕ್ ಪಾಂಡ್ಯ, ನಿತೇಶ್ ರಾಣಾ, ಇಶಾನ್ ಕಿಶಾನ್ (ವಿಕೆಟ್ ಕೀಪರ್), ಸಂಜು ಸಾಮ್ಸನ್ (ವಿಕೆಟ್ ಕೀಪರ್), ಯುಜುವೇಂದ್ರ ಚಾಹಲ್, ರಾಹುಲ್ ಚಾಹರ್, ಕೆ. ಗೌತಮ್, ಕೃನಾಲ್ ಪಾಂಡ್ಯ, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ, ಭುಮನೇಶ್ವರ್ ಕುಮಾರ್ (ಉಪನಾಯಕ), ದೀಪಕ್ ಚಾಹರ್, ನವದೀಪ್ ಸೈನಿ, ಚೇತನ್ ಸಕಾರಿಯಾ.