ಕಾಂಗ್ರೆಸ್ ಅಪಪ್ರಚಾರಕ್ಕೆ ಫಲಿತಾಂಶ ಉತ್ತರ : ಶ್ರೀನಿವಾಸ್ ಪೂಜಾರಿ
ಉಡುಪಿ : ಇಂದು ಮೂರು ಮಹಾನಗರ ಪಾಲಿಕೆ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್ ಅಪಪ್ರಚಾರಕ್ಕೆ ಜನ ಸರಿಯಾದ ಉತ್ತರ ಕೊಟ್ಟಿದ್ದಾರೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಉಡುಪಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೋಟ ಶ್ರೀನಿವಾಸ ಪೂಜಾರಿ, ಮೂರು ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿ ಸಂತಸ ವ್ಯಕ್ತಪಡಿಸಿದರು.
ಕಾಂಗ್ರೆಸ್ನ ಪ್ರಚಾರ ಮತ್ತು ಅಪಪ್ರಚಾರದಲ್ಲಿ ತಿರುಳಿಲ್ಲ ಎಂಬುದು ರಾಜ್ಯದ ಜನಕ್ಕೆ ಗೊತ್ತಾಗಿದೆ. ಜನ ಬಿಜೆಪಿ ಮತ್ತು ಪ್ರಧಾನಿ ಮೋದಿಯ ಕಾರ್ಯಶೈಲಿಗೆ ಮತ ಹಾಕಿದ್ದಾರೆ.
ಸಿಎಂ ಬೊಮ್ಮಾಯಿ ಓಡಾಟ, ಸಂಘಟನಾತ್ಮಕ ಚಟುವಟಿಕೆಯನ್ನು ನೋಡಿ ಜನ ನಮ್ಮನ್ನು ಗೆಲ್ಲಿಸಿದ್ದಾರೆ. ಜನಪರವಾಗಿರುವ ಬಿಜೆಪಿಗೆ ಮತದಾರ ಆಶೀರ್ವಾದ ಮಾಡಿದ್ದಾನೆ.
ಇಡೀ ರಾಜ್ಯದಲ್ಲಿ ಬಿಜೆಪಿಯ ವಾತಾವರಣ ಉತ್ತಮ ಆಗುತ್ತಿದ್ದು, ಸಮಸ್ಯೆ ಬಗೆಹರಿಸುವ ಶಕ್ತಿ ಬಿಜೆಪಿಗೆ ಇದೆ ಎಂದು ಮತದಾರರಿಗೆ ಕೋಟ ಶ್ರೀನಿವಾಸ ಪೂಜಾರಿ ಧನ್ಯವಾದ ತಿಳಿಸಿದ್ದಾರೆ.