ಸುತ್ತೂರಿನಲ್ಲಿ ಬಿಎಸ್ ವೈ ವಿರುದ್ಧ ಶ್ರೀನಿವಾಸ್ ಪ್ರಸಾದ್ ಬುಸ್ ಬುಸ್
ಮೈಸೂರು : ಸಂಪುಟ ವಿಸ್ತರಣೆ ಹಾಗೂ ಪುನರ್ ರಚನೆ ವಿಚಾರವಾಗಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಸಂಸದ ಶ್ರೀನಿವಾಸ್ ಪ್ರಸಾದ್ ಬುಸುಗುಟ್ಟಿದ್ದಾರೆ.
ಸುತ್ತೂರಿನಲ್ಲಿ ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಿದ ಅವರು, ಯಡಿಯೂರಪ್ಪನವರು ಸಿಎಂ ಆಗುವಾಗ ನನ್ನ ಪಾತ್ರವಿತ್ತು.
ಈಗ ಮುಖ್ಯಮಂತ್ರಿ ಆದ್ರಲ್ಲ ಇನ್ನೇನು ಆ ದರ್ದು ಅವರಿಗೆ ಇಲ್ಲ. ಈಗ ಆರಾಮಾಗಿ ಇದ್ದಾರೆ, ನೋಡ್ಕೋತಿವಿ ಬಿಡಿ ಎಂದು ಸಿಎಂ ವಿರುದ್ಧ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದರು.
ಇದೇ ವೇಳೆ ಶಾಸಕ ಹರ್ಷವರ್ಧನ್ ಅವರ “ಕೇಂದ್ರದಲ್ಲಿ ಸಂಸದ ಶ್ರೀನಿವಾಸ್ ಪ್ರಸಾದ್ ಅವರಿಗೆ ಸ್ಥಾನಮಾನ ಕೊಡಿ. ರಾಜ್ಯದಲ್ಲಿ ಆಸ್ತಿ ಸಂಪಾದಿಸಿರುವುದು ನಾನೊಬ್ನೆ ಮಾತ್ರಾನಾ: ಡಿ.ಕೆ ಶಿವಕುಮಾರ್ ಪ್ರಶ್ನೆ
ಇಲ್ಲವಾದರೆ ನನಗಾದರೂ ಸಚಿವ ಸ್ಥಾನ ಕೊಡಿ” ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಶ್ರೀನಿವಾಸ್ ಪ್ರಸಾದ್, ಶಾಸಕ ಹರ್ಷವರ್ಧನ್ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ.
ಹರ್ಷವರ್ಧನ್ ಹೇಳಿಕೆ ಅವರ ವೈಯುಕ್ತಿಕ. ಹಳೆ ಮೈಸೂರು ಭಾಗಕ್ಕೆ ಈಗ ಸಾಕಾಗುವಷ್ಟು ಮಂತ್ರಿ ಸ್ಥಾನ ಇದೆ. ಸಿಎಂ ಹಳೆ ಮೈಸೂರು ಭಾಗದವರೇ.
ಈಶ್ವರಪ್ಪ, ನಾರಾಯಣಗೌಡ, ಎಸ್.ಟಿ ಸೋಮಶೇಖರ್ ಹಳೆಮೈಸೂರಿನವರೇ. ಇನ್ನೆಷ್ಟು ಜನರನ್ನ ಗುಡ್ಡೆ ಹಾಕಿಕೊಳ್ತೀರಾ ಎಂದು ಪ್ರಶ್ನಿಸಿದರು.
ಇನ್ನು ಮಂತ್ರಿ ಪಟ್ಟವನ್ನ ನಾನೇ ಬೇಡ ಎಂದಿದ್ದೇನೆ. ಚುನಾವಣೆಯನ್ನೆ ಬೇಡ ಎಂದಿದ್ದವನು ನಾನು. ಇನ್ನು ಮಂತ್ರಿ ಪಟ್ಟ ಯಾಕೇ ಬೇಕು ನನಗೆ. ನಾನು ಕೇಂದ್ರದಲ್ಲಿ ಸಚಿವಸ್ಥಾನದ ಆಕಾಂಕ್ಷಿಯಲ್ಲ ಎಂದು ಶ್ರೀನಿವಾಸ್ ಪ್ರಸಾದ್ ಹೇಳಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









