ನಮ್ಮ ಸರ್ಕಾರ ಧರ್ಮ ಬಿಟ್ಟು ಅಧರ್ಮಕ್ಕೆ ಸಹಕರಿಸಲ್ಲ : ಶ್ರೀರಾಮುಲು
ಚಿತ್ರದುರ್ಗ : ನಮ್ಮ ಸರ್ಕಾರ ಧರ್ಮ ಬಿಟ್ಟು ಅಧರ್ಮಕ್ಕೆ ಸಹಕರಿಸಲ್ಲ ಕಾನೂನು ಚೌಕಟ್ಟಿನಲ್ಲಿ ತನಿಖೆ ನಡೆಯುತ್ತಿದೆ ಎಂದು ರಮೇಶ್ ಜಾರಕಿಹೊಳಿ ಪ್ರಕರಣದ ಸಂಬಂಧ ಸಚಿವ ಶ್ರೀ ರಾಮುಲು ಪ್ರತಿಕ್ರಿಯೆ ನೀಡಿದ್ದಾರೆ
ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನ ವಿಚಾರವಾಗಿ ಚಿತ್ರದುರ್ಗದಲ್ಲಿ ಪ್ರತಿಕ್ರಿಯಿಸಿದ ಶ್ರೀರಾಮುಲು, ಈ ಬಗ್ಗೆ ಪಕ್ಷ ತೀರ್ಮಾನಿಸುತ್ತೆ. ಸಿಡಿ ಕೇಸ್ ವಿಚಾರವಾಗಿ ಅವರ ವಿರುದ್ಧ ತನಿಖೆ ನಡೆಯುತ್ತಿದೆ. ನಮ್ಮ ಸರ್ಕಾರ ಧರ್ಮ ಬಿಟ್ಟು ಅಧರ್ಮಕ್ಕೆ ಸಹಕರಿಸಲ್ಲ ಕಾನೂನು ಚೌಕಟ್ಟಿನಲ್ಲಿ ತನಿಖೆ ನಡೆಯುತ್ತಿದೆ ಎಂದರು.
ಇದೇ ವೇಳೆ ಕಾಂಗ್ರೆಸ್ ಸಿಎಂ ಅಭ್ಯರ್ಥಿ ವಿಚಾರವಾಗಿ ಮಾತನಾಡಿ, ಕಾಂಗ್ರೆಸ್ ನಲ್ಲಿ ಕುರ್ಚಿಗಾಗಿ ಕಚ್ಚಾಟ ಆರಂಭವಾಗಿದೆ. ಆದರೆ ಕೈ ನಾಯಕರು ಬಿಜೆಪಿಯಲ್ಲಿ ಕುರ್ಚಿಗಾಗಿ ಕಿತ್ತಾಟ ಎಂದು ಆರೋಪ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಮತ್ತೊಮ್ಮೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. ಅಧಿಕಾರ ಕಳೆದುಕೊಂಡು ಕಾಂಗ್ರೆಸ್ ನಾಯಕರಿಗೆ ಬುದ್ಧಿಭ್ರಮಣೆಯಾಗಿದೆ. ಸಿದ್ದರಾಮಯ್ಯ ಮತ್ತೆ ಸಿಎಂ ಆಗುವ ಕನಸು ಕಾಣುತ್ತಿದ್ದಾರೆ. ಸಿಎಂ ಬದಲಾವಣೆ ಬಗ್ಗೆ ಸಿದ್ದರಾಮಯ್ಯ ಭವಿಷ್ಯ ಹೇಳ್ತಾರಾ? ತಾಕತ್ತಿದ್ದರೆ ಕಾಂಗ್ರೆಸ್ ನಲ್ಲಿ ಸಿಎಂ ಅಭ್ಯರ್ಥಿ ಘೋಷಿಸಲಿ ಎಂದು ಸವಾಲು ಹಾಕಿದರು.