ಕಾಂಗ್ರೆಸ್ ಸಭೆ ವೇಳೆ ಕುಸಿದು ಬಿದ್ದು ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ನಿಧನ….
ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ, ಬೀದರ್ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ವರ್ತೂರು ಬಳಿಯ ಖಾಸಗಿ ರೆಸಾರ್ಟ್ ನಲ್ಲಿ ನಡೆಯುತ್ತಿದ್ದ ಟಿಕೆಟ್ ಆಕಾಂಕ್ಷಿಗಳ ಸಭೆ ವೇಳೆ ಶ್ರೀಶೈಲಪ್ಪ ಕುಸಿದು ಬಿದ್ದಿದ್ದಾರೆ. ಆಸ್ಪತ್ರೆಗೆ ದಾಖಲಿಸಲಾಗಿತ್ತದರೂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಗದಗ ಅಥವಾ ರೋಣ ಟಿಕೆಟ್ ಬಯಸಿದ್ದ ಶ್ರೀಶೈಲಪ್ಪ ಬಿದರೂರು, 2019ರಲ್ಲಿ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದರು. ಹೆಚ್.ಕೆ.ಪಾಟೀಲ್ ಕಾಂಗ್ರೆಸ್ಗೆ ಕರೆತಂದಿದ್ದರು. ಗದಗ ಜಿಲ್ಲೆಯ ಪ್ರಭಾವಿ ರಾಜಕೀಯ ಮುಖಂಡ ಶ್ರೀಶೈಲಪ್ಪ, ಲಿಂಗಾಯತ ಸಮುದಾಯದ ಪ್ರಭಾವಿಯಾಗಿದ್ದರು.
ಇಂದು ಆಯೋಜನೆಯಾಗಿದ್ದ ಕಾಂಗ್ರೆಸ್ ಸಭೆಯನ್ನು ರದ್ದು ಮಾಡಲಾಗಿದ್ದು, ರೆಸಾರ್ಟ್ನಲ್ಲಿ ಶ್ರದ್ದಾಂಜಲಿ ಸಭೆ ನಡೆಸಿ ಸಂತಾಪ ಸೂಚಿಸಲಾಯಿತು.
Srishailappa Bidaruru: Former MLA Srishailappa Bidaruru died due to heart attack