‘ನನ್ನಮ್ಮ ಸೂಪರ್ ಸ್ಟಾರ್’ ಸ್ಪರ್ಧಿ ಸಮನ್ವಿ ಅಪಘಾತದಲ್ಲಿ ಸಾವು : ದೇವರಿಲ್ಲ ಎಂದ ಸೃಜನ್
ಬೆಂಗಳೂರು : ನಟಿ ಅಮೃತಾ ನಾಯ್ಡು ಮಗಳು ಸಮನ್ವಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾಳೆ. ತಾಯಿ-ಮಗಳು ಕೋಣನಕುಂಟೆಯ ವಾಜರಹಳ್ಳಿ ಬಳಿ ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ಲಾರಿ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ. ಸಮನ್ವಿ ನನ್ನಮ್ಮ ಸೂಪರ್ ಸ್ಟಾರ್ ರಿಯಾಲಿಟಿ ಶೋನಲ್ಲಿ ಭಾಗವಹಿಸಿ ಪ್ರಖ್ಯಾತಿ ಪಡೆದಿದ್ದರು.
ಈ ಶೋನಲ್ಲಿ ಜಡ್ಜ್ ಆಗಿದ್ದ ಜನ್ ಲೋಕೇಶ್, ಸಮನ್ವಿಯ ಸಾವು ದೇವರ ಮೇಲಿನ ನಂಬಿಕೆ ಕಳೆದುಕೊಳ್ಳುವಂತೆ ಮಾಡಿದೆ ಎಂದಿದ್ದಾರೆ. ನನಗೆ ಹೆಣ್ಣು ಮಗುವಿಲ್ಲ ಎಂಬ ಕೊರಗು ಇದೆ, ಇಂತಹ ಮುದ್ದು ಮುದ್ದಾದ ಪುಟ್ಟ ಹೆಣ್ಣು ಮಕ್ಕಳನ್ನು ನೋಡಿದಾಗ ನಿಜಕ್ಕೂ ಖುಷಿಯಾಗುತ್ತಿತ್ತು, ನನಗೂ ಇಂಥಹಾ ಒಂದು ಹೆಣ್ಣು ಮಗು ಇರಬೇಕಿತ್ತು ಎನಿಸಿತ್ತು. ಜಗತ್ತನ್ನು ಇನ್ನೂ ನೋಡದ ಈ ಮಗು ಇಂದು ಇಲ್ಲ ಎಂದು ಹೇಳಲು ನಿಜಕ್ಕೂ ನೋವಾಗುತ್ತಿದೆ ಎಂದು ಸೃಜನ್ ಲೋಕೇಶ್ ಬೇಸರ ಹೊರಹಾಕಿದ್ದಾರೆ.
ಅಪಘಾತದಲ್ಲಿ ಮೃತಪಟ್ಟ ಸೂಪರ್ ಸ್ಟಾರ್ ರಿಯಾಲಿಟಿ ಶೋನ ಸ್ಪರ್ಧಿ ಸಮನ್ವಿ ಸಾವಿಗೆ ಲಾರಿ ಚಾಲಕನ ಅಜಾಗರೂಚತೆಯೇ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಹೀಗಾಗಿ ಲಾರಿ ಚಾಲಕ ಮಂಚೇಗೌಡನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಕೋಣನಕುಂಟೆಯ ವಾಜರಹಳ್ಳಿ ಬಳಿ ಸ್ಕೂಟರ್ ನಲ್ಲಿ ಅಮೃತಾ ಮತ್ತು ಸಮನ್ವಿ ಒಟ್ಟಿಗೆ ಬರುತ್ತಿದ್ದರು. ಈ ವೇಳೆ ಹಿಂದಿನಿಂದ ಬಂದ ಟಿಪ್ಪರ್ ಲಾರಿ ಬೈಕ್ ಗೆ ಗುದ್ದಿದ ಪರಿಣಾಮ ಸಮನ್ವಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.