SSC CHSL Recruitment 2025 : ಸ್ಟಾಫ್ ಸೆಲೆಕ್ಷನ್ ಕಮಿಷನ್ ನಿಂದ ಭಾರತದೆಲ್ಲೆಡೆ ಅಗತ್ಯವಿರುವ ಗ್ರೂಪ್-ಸಿ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ.
ಹುದ್ದೆ : ಲೋವರ್ ಡಿವಿಷನ್ ಕ್ಲರ್ಕ್ (LDC)/ ಜೂನಿಯರ್ ಸೆಕ್ರೆಟರಿಯೆಟ್ ಅಸಿಸ್ಟೆಂಟ್ (JSA), ಡಾಟಾ ಎಂಟ್ರಿ ಆಪರೇಟರ್ (DEO)
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 3131 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 12ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ವಯೋಮಿತಿ : ದಿನಾಂಕ 01-01-2026ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 27 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
• ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ
ವೇತನ :
ಹುದ್ದೆ ಹುದ್ದೆಗಳ ಸಂಖ್ಯೆ
ಲೋವರ್ ಡಿವಿಷನ್ ಕ್ಲರ್ಕ್ (LDC)/ ಜೂನಿಯರ್ ಸೆಕ್ರೆಟರಿಯೆಟ್ ಅಸಿಸ್ಟೆಂಟ್ (JSA) 19,900 – 63,200
ಡಾಟಾ ಎಂಟ್ರಿ ಆಪರೇಟರ್ (DEO) 25,500 – 81,100
ಆಯ್ಕೆ ವಿಧಾನ : ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ, ಸ್ಕಿಲ್ ಟೆಸ್ಟ್ (DEO ಹುದ್ದೆಗೆ), ಟೈಪಿಂಗ್ ಟೆಸ್ಟ್ (LDC ಹುದ್ದೆಗೆ), ದಾಖಲೆಗಳ ಪರಿಶೀಲನೆ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.
ಪರೀಕ್ಷಾ ಕೇಂದ್ರಗಳು : ಬೆಳಗಾವಿ, ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಉಡುಪಿ.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು
ನಿಗದಿತ ಅರ್ಜಿ ಶುಲ್ಕದ ವಿವರ :
• ಎಸ್ಸಿ, ಎಸ್ಟಿ, ಪಿಡಬ್ಲ್ಯೂಡಿ, ಮಾಜಿ ಸೈನಿಕ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ
• ಉಳಿದ ಅಭ್ಯರ್ಥಿಗಳು ರೂ. 100 ಅರ್ಜಿ ಶುಲ್ಕ ಪಾವತಿಸಬೇಕು.
ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜೂನ್ 23, 2025
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜುಲೈ 18, 2025
ಆನ್‌ಲೈನ್‌ನಲ್ಲಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಜುಲೈ 19, 2025
https://ssc.gov.in/login








