SSC Stenographer Recruitment 2025 : ಸ್ಟಾಫ್ ಸೆಲೆಕ್ಷನ್ ಕಮಿಷನ್ ನಿಂದ ಭಾರತದೆಲ್ಲೆಡೆ ವಿವಿಧ ಇಲಾಖೆಗಳಲ್ಲಿ ಅಗತ್ಯವಿರುವ ಸ್ಟೆನೋಗ್ರಾಫರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ.
ಹುದ್ದೆ : ಸ್ಟೆನೋಗ್ರಾಫರ್ ಗ್ರೇಡ್ ‘ಸಿ’ ಮತ್ತು ಸ್ಟೆನೋಗ್ರಾಫರ್ ಗ್ರೇಡ್ ‘ಡಿ’
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ವಿವಿಧ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 261 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 12ನೇ ತರಗತಿ/ ತತ್ಸಮಾನ ವಿದ್ಯಾರ್ಹತೆ ಹಾಗೂ ನಿಗದಿತ ಟೈಪಿಂಗ್ ಜ್ಞಾನ ಹೊಂದಿರಬೇಕು.
ವಯೋಮಿತಿ : ದಿನಾಂಕ 01-08-2025ಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
• ಸ್ಟೆನೋಗ್ರಾಫರ್ ಗ್ರೇಡ್ ‘ಸಿ’ ಹುದ್ದೆಗಳಿಗೆ – ಗರಿಷ್ಠ 30 ವರ್ಷ
• ಸ್ಟೆನೋಗ್ರಾಫರ್ ಗ್ರೇಡ್ ‘ಡಿ’ ಹುದ್ದೆಗಳಿಗೆ – ಗರಿಷ್ಠ 27 ವರ್ಷ
ವಯೋಮಿತಿ ಸಡಿಲಿಕೆ :
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
• ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ – 05 ವರ್ಷ
• ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ
• ಪಿಡಬ್ಲ್ಯೂಬಿಡಿ (ಒಬಿಸಿ) ಅಭ್ಯರ್ಥಿಗಳಿಗೆ – 13 ವರ್ಷ
• ಪಿಡಬ್ಲ್ಯೂಬಿಡಿ (ಎಸ್ಸಿ/ಎಸ್ಟಿ) ಅಭ್ಯರ್ಥಿಗಳಿಗೆ – 15 ವರ್ಷ
ಆಯ್ಕೆ ವಿಧಾನ : ಕಂಪ್ಯೂಟರ್ ಆಧಾರಿತ ಪರೀಕ್ಷೆ, ಸ್ಕಿಲ್ ಟೆಸ್ಟ್ ಹಾಗೂ ದಾಖಲೆಗಳ ಪರಿಶೀಲನೆ ನಡೆಸಿ ಆಯ್ಕೆ ಮಾಡಲಾಗುವುದು.
ಪರೀಕ್ಷಾ ಕೇಂದ್ರಗಳು : ಬೆಂಗಳೂರು, ಬೆಳಗಾವಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ಹುಬ್ಬಳ್ಳಿ ಮತ್ತು ಉಡುಪಿ.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ನಿಗದಿತ ಅರ್ಜಿ ಶುಲ್ಕದ ವಿವರ :
• ರೂ. 100 ಶುಲ್ಕವನ್ನು ಪಾವತಿಸಬೇಕು.
• ಎಸ್ಸಿ, ಎಸ್ಟಿ, ಪಿಡಬ್ಲ್ಯೂಡಿ, ಮಾಜಿ ಸೈನಿಕ, ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕ
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜೂನ್ 06, 2025
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜೂನ್ 26, 2025