ಲಾಕ್ ಡೌನ್ ಅವಧಿಯ ನಂತರ ಒಂದು ವಾರ ತರಗತಿ ನಡೆಸಿ, ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ನಡೆಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ಚಾಮರಾಜನಗರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಲಾಕ್ ಡೌನ್ ಮುಗಿದ ಬಳಿಕ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಲಾಗುವುದು ಹಾಗೂ ಪರೀಕ್ಷಾ ವೇಳಾಪಟ್ಟಿ ಪ್ರಕಟವಾದ ಬಳಿಕ ಒಂದು ವಾರ ಎಸ್.ಎಸ್.ಎಲ್.ಸಿ ತರಗತಿಗಳು ನಡೆಯಲಿದೆ ಎಂದು ತಿಳಿಸಿದರು.
ಲಾಕ್ ಡೌನ್ ನಿಂದಾಗಿ ಪರೀಕ್ಷೆ ಮುಂದೂಡಿ ದೀರ್ಘ ಕಾಲ ಅಭ್ಯಾಸ ರಜೆ ನೀಡಿರುವುದರಿಂದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯುವ ಚೈತನ್ಯ ತುಂಬಬೇಕಿದೆ. ಪರೀಕ್ಷೆ ಬರೆಯುವ ಬಗ್ಗೆಯೂ ವಿದ್ಯಾರ್ಥಿಗಳಿಗೆ ಉತ್ಸಾಹ ಮೂಡಬೇಕಾಗಿದೆ. ಇದಕ್ಕಾಗಿ ಒಂದು ವಾರ ತರಗತಿ ನಡೆಸಿ ನಂತರ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಸಲಾಗುವುದು. ಏಪ್ರಿಲ್ 15ರ ಲಾಕ್ ಡೌನ್ ಮುಗಿದ ಬಳಿಕ ಪರಿಸ್ಥಿತಿಯನ್ನು ಅವಲೋಕಿಸಿ ಎಸ್.ಎಸ್.ಎಲ್.ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ಸಚಿವರು ತಿಳಿಸಿದರು.
ವೈಭವ್ ಶತಕ ಬಾರಿಸಿದರೆ ಬೆತ್ತಲೆಯಾಗಿ ಓಡುತ್ತೇನೆ; ಪಾಕ್ ಮಾಜಿ ಆಟಗಾರನ ವಿಚಿತ್ರ ಸವಾಲು
ಭಾರತದ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ಅವರ ಅಂತಾರಾಷ್ಟ್ರೀಯ ಕ್ರಿಕೆಟ್ ಪ್ರವೇಶದ ಬಗ್ಗೆ ಕ್ರಿಕೆಟ್ ಅಭಿಮಾನಿಗಳಲ್ಲಿ ಭಾರೀ ನಿರೀಕ್ಷೆ ಮೂಡಿದೆ.ಈ ನಡುವೆ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ತನ್ವೀರ್...








