ಬೆಂಗಳೂರು : ರಾಜ್ಯದಲ್ಲಿ ಎಸ್.ಎಸ್.ಎಲ್ ,ಸಿ ಪರೀಕ್ಷೆ ರದ್ದು ಮಾಡುವಂತೆ ಒತ್ತಾಯಿಸಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ನಿವಾಸದ ಎದುರು ಕಾಂಗ್ರೆಸ್ ನ ವಿಧ್ಯಾರ್ಥಿ ಘಟಕ ಎನ್.ಎಸ್.ಯು. ಐ ಧರಣಿ ನಡೆಸಿದೆ. ಧರಣಿ ನಡೆಸಿದ ಎನ್ ಎಸ್. ಯು. ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
ರಾಜ್ಯದಲ್ಲಿ ಕೊರೊನಾ ಸೋಂಕು ದಿನ ದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹಾಗಾಗಿ ರಾಜ್ಯದಲ್ಲಿ ಎಸ್.ಎಸ್.ಎಲ್,ಸಿ ಪರೀಕ್ಷೆಗಳನ್ನು ರದ್ದು ಮಾಡುವಂತೆ ಒತ್ತಾಯಗಳು ಕೇಳಿ ಬಂದಿದ್ದವು. ಅಲ್ಲದೆ ಮೊನ್ನೆ ನಡೆದ ಪಿಯುಸಿ ಪರೀಕ್ಷೆಯಲ್ಲಿ ಕೊರೊನಾ ಶಂಕೆ ಇರುವ ವಿದ್ಯಾರ್ಥಿನಿ ಪರೀಕ್ಷೆ ಬರೆದಿದ್ದಳು. ಇದರಿಂದ ಸಾಕಷ್ಟು ಜನ ಆತಂಕದಲ್ಲಿದ್ದರು. ಈ ನಡುವೆ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಲು ಸಿದ್ದತೆ ನಡೆಯುತ್ತಿದೆ.
ಶಿಕ್ಷಣ ಸಚಿವ ಸುರೇಶ್ ಕುಮಾರ್ ನಿವಾಸ ಎದುರು ಎನ್ ಎಸ್ ಯುಐ ಎಸ್.ಎಸ್.ಎಲ್ ,ಸಿ ಪರೀಕ್ಷೆ ರದ್ದು ಮಾಡುವಂತೆ ಒತ್ತಾಯಿಸಿ ಧರಣಿ ಮಾಡುತ್ತಿದ್ದರು. ಈ ವೇಳೆ ಎನ್ ಎಸ್ ಯುಐ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.