SSLC ಪರೀಕ್ಷೆ-02 ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಬೆಂಗಳೂರಿನ ಸಾರಿಗೆ ಸಂಸ್ಥೆ BMTC ಸಿಹಿ ಸುದ್ದಿಯೊಂದನ್ನು ನೀಡಿದೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ತೋರಿಸಿದರೆ BMTCಯ ಸಾಮಾನ್ಯ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ ಎಂಬ ಮಾಹಿತಿ ಸಂಸ್ಥೆಯ ಪತ್ರಿಕಾ ಪ್ರಕಟಣೆಯ ಮೂಲಕ ನೀಡಿದೆ.
BMTC ಈ ನಿರ್ಧಾರವನ್ನು ವಿದ್ಯಾರ್ಥಿ ಸಮುದಾಯದ ಹಿತದೃಷ್ಟಿಯಿಂದ ತೆಗೆದುಕೊಂಡಿದ್ದು, ಯಾವುದೇ ರೀತಿಯ ಆರ್ಥಿಕ ತೊಂದರೆ ಇಲ್ಲದೇ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ತಲುಪುವಂತೆ ಮಾಡುವ ಉದ್ದೇಶದಿಂದ ಈ ಸೇವೆಯನ್ನು ಆರಂಭಿಸಿದೆ. ಈ ಮೂಲಕ ನಗರಾದ್ಯಾಂತ ಪರೀಕ್ಷಾ ಕೇಂದ್ರಗಳಿಗೆ ಪ್ರಯಾಣಿಸುವ ವಿದ್ಯಾರ್ಥಿಗಳಿಗೆ ದೊಡ್ಡ ಅನುಕೂಲ ಕಲ್ಪಿಸಲಾಗಿದೆ.
ಪರೀಕ್ಷಾ ದಿನಗಳಲ್ಲಿ ಈ ಉಚಿತ ಬಸ್ ಸೇವೆಯನ್ನು ಎಲ್ಲ ಸಾಮಾನ್ಯ BMTC ಬಸ್‌ಗಳಲ್ಲಿ ಪ್ರವೇಶ ಪತ್ರ ತೋರಿಸಿ ಉಪಯೋಗಿಸಬಹುದು. ಜೊತೆಗೆ, BMTC ಪ್ರತಿವರ್ಷದಂತೆ ಈ ವರ್ಷವೂ ವಿದ್ಯಾರ್ಥಿಗಳಿಗಾಗಿ ರಿಯಾಯಿತಿ ದರದಲ್ಲಿ ಪಾಸುಗಳನ್ನು ವಿತರಣೆ ಮಾಡುತ್ತಿದ್ದು, ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ಶಾಲೆಗೂ ಮತ್ತೆ ವಾಪಸ್ ಬರುವ ಪ್ರಯಾಣವನ್ನು ಕಡಿಮೆ ಖರ್ಚಿನಲ್ಲಿ ಸುಲಭವಾಗಿ ಮಾಡಿಕೊಳ್ಳಬಹುದು ಎಂದು ಸಂಸ್ಥೆ ತಿಳಿಸಿದೆ.








