ADVERTISEMENT
Monday, June 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕರ್ನಾಟಕದಲ್ಲಿ ಏಕಿಲ್ಲ ಎಸ್‌ಎಸ್‌ಎಲ್‌ಸಿ ಪರೀಕ್ಷೆ ರದ್ದು..!ಸರ್ಕಾರದ ನಡೆ ಏನು ?

saaksha tv by saaksha tv
June 9, 2020
in Newsbeat, Politics, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು : ದಿನದಿಂದ ದಿನಕ್ಕೆ ಕೋವಿಡ್-೧೯ ಪ್ರಕರಣಗಳ ಸಂಖ್ಯೆ ಏರುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ನೆರೆಯ ತೆಲಂಗಾಣ ಹಾಗೂ ತಮಿಳುನಾಡು ರಾಜ್ಯಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆ ರದ್ದು ಮಾಡುವ ಮೂಲಕ ಮಹತ್ವದ ಹೆಜ್ಜೆ ಇಟ್ಟಿರುವ ಬೆನ್ನಲ್ಲೇ ಕರ್ನಾಟಕದಲ್ಲೂ ಪರೀಕ್ಷೆ ಏಕೆ ರದ್ದು ಮಾಡಬಾರದು ಎಂಬ ಪ್ರಶ್ನೆಯನ್ನು ಪೋಷಕರು ರಾಜ್ಯ ಸರ್ಕಾರದ ಮುಂದಿಟ್ಟಿದ್ದಾರೆ.
ಮಹಾರಾಷ್ಟç ಹಾಗೂ ತಮಿಳುನಾಡಿನಿಂದ ಬರುತ್ತಿರುವವರಿಂದಲೇ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಹೋಗುತ್ತಿದ್ದು, ರಾಜ್ಯದ ಜನತೆಯನ್ನು ಆತಂಕಕ್ಕೆ ದೂಡಿದೆ.

ಹೆಚ್ಚೂ ಕಡಿಮೆ ಲಾಕ್‌ಡೌನ್ ತೆರವಾಗಿದೆ. ಜನಜೀವನ ಸಹಜ ಸ್ಥಿತಿಯತ್ತ ಮರಳುತ್ತಿದೆ. ಇದರ ಜೊತೆಯಲ್ಲೇ ಕೊರೊನಾ ಅಟ್ಟಹಾಸ ಮುಂದುವರೆದಿದೆ. ಹೀಗಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸೇರಿದಂತೆ ಎಲ್ಲಾ ಪರೀಕ್ಷೆಗಳನ್ನು ರದ್ದು ಮಾಡುವಂತೆ ಪೋಷಕರು ರಾಜ್ಯಾದ್ಯಂತ ಸೋಷಿಯಲ್ ಮೀಡಿಯಾ ಮೂಲಕ ಅಭಿಯಾನ ನಡೆಸಿದ್ದರು. ಜತೆಗೆ ಈ ವರ್ಷ ಶಾಲಾ-ಕಾಲೇಜುಗಳನ್ನು ತೆರಯಬೇಡಿ. ಖಾಸಗಿ ಶಾಲೆ ಹಾಗೂ ಕಾಲೇಜುಗಳ ಆಡಳಿತ ಮಂಡಳಿಗಳ ಲಾಬಿಗೆ ಮಣಿಯಬೇಡಿ ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸುತ್ತಲೇ ಬಂದಿದ್ದರು. ಆದರೆ ರಾಜ್ಯ ಶಿಕ್ಷಣ ಇಲಾಖೆ ಮಾತ್ರ ಜೂ.೨೫ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾಡಿಯೇ ತೀರುತ್ತೇವೆ ಎಂದು ಹಠಕ್ಕೆ ಬಿದ್ದಂತೆ ಕಾಣುತ್ತಿದೆ.

Related posts

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ತೆರಿಗೆ ಹಣಕ್ಕಿಂತ ಜನರ ಆರೋಗ್ಯವೇ ಮುಖ್ಯ: ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ- ಮುಕ್ತ ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಖಡಕ್ ನಿರ್ಧಾರ

June 29, 2026
ಮೋದಿ ಸರ್ಕಾರದ ವಿದೇಶಾಂಗ ನೀತಿಗೆ ಸಕ್ಸಸ್ : ಶತ್ರುಗಳಿಗೆ ಹಾರ್ಮುಜ್ ಬಂದ್ ಮಿತ್ರ ಭಾರತಕ್ಕೆ ಮುಕ್ತ ಅವಕಾಶ ಟ್ರಂಪ್ ಬೆದರಿಕೆಗಳಿಗೆ ಕವಡೆ ಕಾಸಿನ ಬೆಲೆ ನೀಡದ ಇರಾನ್

ಸಿಎಂ ಸಿಂಹಾಸನ ನಶ್ವರ ಜನರ ಹೃದಯ ಸಿಂಹಾಸನ ಶಾಶ್ವತ: ಅಧಿಕಾರ ಹೋದರೂ ಕುಗ್ಗದ ವರ್ಚಸ್ಸು ಮಾಜಿ CM ಸಿದ್ದರಾಮಯ್ಯ ಭಾವನಾತ್ಮಕ ಪೋಸ್ಟ್

June 29, 2026

ಪರೀಕ್ಷೆ ಬರೆಯುವ ವೇಳೆ ವಿದ್ಯಾರ್ಥಿಗಳು ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಕಷ್ಟ. ಬಹುಬೇಗ ಮಕ್ಕಳಿಗೆ ಸೋಂಕು ಹರಡುವ ಸಾಧ್ಯತೆ ಇದೆ. ಹೀಗಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬೇಡ ಎಂದು ಪೋಷಕರು ಆಗ್ರಹಿಸುತ್ತಿದ್ದಾರೆ. ಆದರೆ, ಶಿಕ್ಷಣ ಇಲಾಖೆ ಪರೀಕ್ಷೆ ನಡೆಸಲು ಭರದ ಸಿದ್ದತೆ ಮುಂದುವರೆಸಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾಡಿಯೇ ತೀರುತ್ತೇವೆ

ನೆರೆಯ ತೆಲಂಗಾಣ, ತಮಿಳುನಾಡು ರಾಜ್ಯಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಇಂದು ರದ್ದು ಮಾಡಿ ಆದೇಶ ಹೊರಡಿಸಿದ್ದರೂ ಮಾತ್ರ, ಕರ್ನಾಟಕ ಸರ್ಕಾರ ಮಾತ್ರ ಪರೀಕ್ಷೆ ಮಾಡಿಯೇ ಸಿದ್ದ ಎಂದು ಹೇಳಿದೆ.
ಜೂ.೨೫ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಎಂದಿನಂತೆ ನಡೆಯಲಿವೆ. ಪರೀಕ್ಷೆಗಳನ್ನು ರದ್ದು ಮಾಡುವ ಪ್ರಶ್ನೆಯೇ ಇಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್‌ಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಉಡುಪಿಯಲ್ಲಿ ಮಾತನಾಡಿದ ಸುರೇಶ್‌ಕುಮಾರ್, ನಿಗದಿಯಂತೆ ಪರೀಕ್ಷೆಗಳು ನಡೆಯಲಿವೆ. ಹೀಗಾಗಿ ವಿದ್ಯಾರ್ಥಿಗಳು ಗೊಂದಲ ಮಾಡಿಕೊಳ್ಳುವುದು ಬೇಡ. ಪರೀಕ್ಷೆ ನಡೆಸಲು ಎಲ್ಲಾ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದೇವೆ. ಹೀಗಾಗಿ ಭಯಪಡದೇ ಪರೀಕ್ಷೆಗೆ ಸಿದ್ದತೆ ಮಾಡಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಮನವಿ ಮಾಡಿದ್ದಾರೆ.
ತಮಿಳುನಾಡಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ರದ್ದು ಮಾಡಿದ್ದರೂ ನಾವು ಮಾಡಲ್ಲ. ನಾವು ತಮಿಳುನಾಡು ಮಾದರಿಯನ್ನು ಅನುಸರಿಸಲ್ಲ. ನಾವು ಮಾಡುತ್ತಿರುವ ಕ್ರಮಗಳನ್ನು ನೋಡಿ ತಮಿಳುನಾಡು ಪರೀಕ್ಷೆ ನಡೆಸಲಿ. ಒಂದು ವೇಳೆ ಜೂನ್‌ನಲ್ಲಿ ಪರೀಕ್ಷೆ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅಗದೇ ಇದ್ದರೆ, ಜುಲೈನಲ್ಲಿ ಮತ್ತೊಂದು ಅವಕಾಶ ನೀಡುತ್ತೇವೆ. ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯಲ್ಲಿ ಪರೀಕ್ಷೆ ವಂಚಿತರಿಗೆ ಪರೀಕ್ಷೆ ಬರೆಯಲು ಅವಕಾಶ ನೀಡುತ್ತೇವೆ ಎಂದು ಸುರೇಶ್‌ಕುಮಾರ್ ತಿಳಿಸಿದ್ದಾರೆ.

ತಮಿಳುನಾಡಲ್ಲೂ ಎಸ್‌ಎಸ್‌ಎಸ್‌ಸಿ ಪರೀಕ್ಷೆ ರದ್ದು ಕರ್ನಾಟಕದಲ್ಲೂ ಕ್ಯಾನ್ಸಲ್ ಆಗುತ್ತಾ..?

ಬೆಂಗಳೂರು: ದೇಶಾದ್ಯಂತ ಕೊರೋನಾ ಅಟ್ಟಹಾಸ ಮುಂದುವರೆದಿದ್ದು, ಸೋಂಕಿತರ ಸಂಖ್ಯೆ ೨ ಲಕ್ಷದ ೬೬ ಸಾವಿರದ ಗಡಿ ದಾಟಿದ್ದು, ಭಾರಿ ಅತಂಕಕ್ಕೆ ಕಾರಣವಾಗಿದೆ. ಇನ್ನೊಂದೆಡೆ ದೇಶದಲ್ಲಿ ಅತಿಹೆಚ್ಚು ಕೊರೊನಾ ಸೋಂಕಿತರನ್ನು ಹೊಂದಿರುವ ಮಹಾರಾಷ್ಟç ನಂತರ ಎರಡನೇ ಸ್ಥಾನದಲ್ಲಿರುವ ತಮಿಳುನಾಡು, ಪ್ರಸಕ್ತ ವರ್ಷದ ಎಸ್‌ಎಸ್‌ಎಸ್‌ಸಿ ಪರೀಕ್ಷೆ ಹಾಗೂ ಪ್ರಥಮ ಪಿಯುಸಿ ಪರೀಕ್ಷೆಗಳನ್ನು ರದ್ದು ಮಾಡಿ ಮಹತ್ವದ ಆದೇಶ ಮಾಡಿದೆ.

ನೆರೆಯ ತೆಲಂಗಾಣ ಸರ್ಕಾರ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ರದ್ದು ಮಾಡಿರುವ ಬೆನ್ನಲ್ಲೇ ತಮಿಳುನಾಡು ಕೂಡ ಪರೀಕ್ಷೆ ರದ್ದು ಮಾಡುವ ಮೂಲಕ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಮನೆ ಮಾಡಿದ್ದ ಆತಂಕವನ್ನು ದೂರ ಮಾಡಿದೆ.
sಸದ್ಯ ತಮಿಳುನಾಡಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ೩೩ ಸಾವಿರದ ೨೨೯ಕ್ಕೆ ತಲುಪಿದೆ. ಕಳೆದ ೨೪ ಗಂಟೆಗಳಲ್ಲಿ ತಮಿಳುನಾಡಿನಲ್ಲಿ ೧೫೬೨ ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಹೋಗುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿನ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.

Tags: sslc exam
ShareTweetSendShare
Join us on:

Related Posts

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ತೆರಿಗೆ ಹಣಕ್ಕಿಂತ ಜನರ ಆರೋಗ್ಯವೇ ಮುಖ್ಯ: ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ- ಮುಕ್ತ ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಖಡಕ್ ನಿರ್ಧಾರ

by Shwetha
June 29, 2026
0

ಬೆಂಗಳೂರು: ರಾಜ್ಯದ ಜನರ ಆರೋಗ್ಯದ ಹಿತದೃಷ್ಟಿಯಿಂದ ಪಾನ್ ಮಸಾಲ ಹಾಗೂ ಗುಟ್ಕಾವನ್ನು ಸಂಪೂರ್ಣವಾಗಿ ನಿಷೇಧಿಸಲು ಕರ್ನಾಟಕ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ರಾಜ್ಯದ ಬೊಕ್ಕಸಕ್ಕೆ ನೂರು ಕೋಟಿ...

ಮೋದಿ ಸರ್ಕಾರದ ವಿದೇಶಾಂಗ ನೀತಿಗೆ ಸಕ್ಸಸ್ : ಶತ್ರುಗಳಿಗೆ ಹಾರ್ಮುಜ್ ಬಂದ್ ಮಿತ್ರ ಭಾರತಕ್ಕೆ ಮುಕ್ತ ಅವಕಾಶ ಟ್ರಂಪ್ ಬೆದರಿಕೆಗಳಿಗೆ ಕವಡೆ ಕಾಸಿನ ಬೆಲೆ ನೀಡದ ಇರಾನ್

ಸಿಎಂ ಸಿಂಹಾಸನ ನಶ್ವರ ಜನರ ಹೃದಯ ಸಿಂಹಾಸನ ಶಾಶ್ವತ: ಅಧಿಕಾರ ಹೋದರೂ ಕುಗ್ಗದ ವರ್ಚಸ್ಸು ಮಾಜಿ CM ಸಿದ್ದರಾಮಯ್ಯ ಭಾವನಾತ್ಮಕ ಪೋಸ್ಟ್

by Shwetha
June 29, 2026
0

ಮೈಸೂರು: ಮುಖ್ಯಮಂತ್ರಿ ಸ್ಥಾನ ಎಂಬುದು ಶಾಶ್ವತವಲ್ಲ, ಅದು ಬಂದು ಹೋಗುವಂತದ್ದು. ಆದರೆ ಜನರ ಹೃದಯದಲ್ಲಿ ಪಡೆಯುವ ಸ್ಥಾನ ಎಂದಿಗೂ ಅಳಿಯದ ಶಾಶ್ವತ ಆಸ್ತಿ ಎಂದು ಮಾಜಿ ಮುಖ್ಯಮಂತ್ರಿ...

ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ನಾವು ಕೇಂದ್ರದ ಪರ: ಕರ್ನಾಟಕವನ್ನು ಸ್ಲೀಪರ್ ಸೆಲ್ ಆಗಲು ಬಿಡುವುದಿಲ್ಲ ಎಂದ ಸಚಿವ ಪ್ರಿಯಾಂಕ್ ಖರ್ಗೆ

ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ನಾವು ಕೇಂದ್ರದ ಪರ: ಕರ್ನಾಟಕವನ್ನು ಸ್ಲೀಪರ್ ಸೆಲ್ ಆಗಲು ಬಿಡುವುದಿಲ್ಲ ಎಂದ ಸಚಿವ ಪ್ರಿಯಾಂಕ್ ಖರ್ಗೆ

by Shwetha
June 29, 2026
0

ಬೆಂಗಳೂರು: ರಾಷ್ಟ್ರೀಯ ಭದ್ರತೆ ಮತ್ತು ದೇಶದ ಹಿತಾಸಕ್ತಿಯ ವಿಷಯ ಬಂದಾಗ ರಾಜ್ಯ ಸರ್ಕಾರವು ಯಾವಾಗಲೂ ಕೇಂದ್ರದ ಒಕ್ಕೂಟ ಸರ್ಕಾರದ ಪರವಾಗಿ ಇರುತ್ತದೆ. ಯಾವುದೇ ಕಾರಣಕ್ಕೂ ಕರ್ನಾಟಕವನ್ನು ದೇಶದ್ರೋಹಿಗಳ...

ಚಪ್ಪಲಿ ಎಸೆದವರೇ ಒಂದು ದಿನ ಪ್ರದೀಪ್ ಈಶ್ವರ್ ಗೆ ಹಾರ ಹಾಕ್ತಾರೆ: ಯುಟಿ ಖಾದರ್ ಭವಿಷ್ಯ

ಚಪ್ಪಲಿ ಎಸೆದವರೇ ಒಂದು ದಿನ ಪ್ರದೀಪ್ ಈಶ್ವರ್ ಗೆ ಹಾರ ಹಾಕ್ತಾರೆ: ಯುಟಿ ಖಾದರ್ ಭವಿಷ್ಯ

by Shwetha
June 29, 2026
0

ಮಂಗಳೂರು: ಕೆಂಪೇಗೌಡ ದಿನಾಚರಣೆಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರ ಕಾರಿನ ಮೇಲೆ ಕಿಡಿಗೇಡಿಗಳು ಚಪ್ಪಲಿ ಎಸೆದ ಪ್ರಕರಣ ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ....

ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿದ್ದು ನನ್ನ ಬೆಂಬಲದಿಂದಲೇ: ಎಚ್ಡಿಕೆ ಕಾಲೆಳೆದ ಶಾಸಕ ಜಿಟಿ ದೇವೇಗೌಡ

ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿದ್ದು ನನ್ನ ಬೆಂಬಲದಿಂದಲೇ: ಎಚ್ಡಿಕೆ ಕಾಲೆಳೆದ ಶಾಸಕ ಜಿಟಿ ದೇವೇಗೌಡ

by Shwetha
June 29, 2026
0

ಮೈಸೂರು: ಜೆಡಿಎಸ್ ಹಿರಿಯ ನಾಯಕ ಹಾಗೂ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ ಟಿ ದೇವೇಗೌಡ ಅವರು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ನೇರ ವಾಗ್ದಾಳಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram