ಇಂದು ಎಸ್ ಎಸ್ ಎಲ್ ಸಿ ಪರೀಕ್ಷೆ ದಿನಾಂಕ ಪ್ರಕಟ: ಸುರೇಶ್ ಕುಮಾರ್
ಬೆಂಗಳೂರು : ಇವತ್ತು ಈ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ ದಿನಾಂಕ ಪ್ರಕಟ ಮಾಡೋದಾಗಿ ಶಿಕ್ಷಣ ಸಿಚವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಎಸ್ ಎಸ್ ಎಲ್ ಸಿ ಪರೀಕ್ಷಾ ದಿನಾಂಕ ಕುರಿತಂತೆ ಸದ್ಯ ವಿಧಾನಸೌಧದಲ್ಲಿ ಅಧಿಕಾರಿಗಳ ಸಭೆ ನಡೆಯುತ್ತಿದ್ದು, ಈ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಸುರೇಶ್ ಕುಮಾರ್, ಇಂದು ಎಸ್ ಎಸ್ ಎಲ್‍ಸಿ ಪರೀಕ್ಷೆ ದಿನಾಂಕ ಪ್ರಕಟ ಮಾಡಲಿದ್ದೇವೆ. ಪರೀಕ್ಷೆ ವಿಚಾರವಾಗಿ ಇಂದು ಮಧ್ಯಾಹ್ನ ಸುದ್ದಿಗೋಷ್ಟಿಯಲ್ಲಿ ಘೋಷಣೆ ಮಾಡಲಾಗುವುದು. ಶಾಲೆ ಆರಂಭ ಹಾಗೂ ಪರೀಕ್ಷೆ ಪೂರ್ವ ತಯಾರಿ ನಡೆಯುತ್ತಿದೆ ಎಂದು ತಿಳಿಸಿದರು.
ಈ ಕುರಿತು ವಿಕಾಸಸೌಧದಲ್ಲಿಂದು ರಾಜ್ಯದ ಜಿಲ್ಲಾಧಿಕಾರಿ, ಸಿಇಓ ಅಧಿಕಾರಿಗಳ ಜೊತೆ ವೀಡಿಯೋ ಕಾನ್ಫರೆನ್ಸ್ ಇದೆ. ಸಭೆ ಬಳಿಕ ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ಶಾಲೆ ಆರಂಭ ಕುರಿತು ಮಾಹಿತಿ ಪಡೆಯುತ್ತೇವೆ. ವಿದ್ಯಾಗಮ, ಭೌತಿಕ ತರಗತಿ ಕುರಿತು ಇನ್ನೂ ನಿರ್ಧಾರ ಮಾಡಬೇಕಿದೆ ಎಂದರು.
ಇನ್ನು ಮಕ್ಕಳಿಗೆ ಲಸಿಕೆ ನೀಡುವ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಮಕ್ಕಳಿಗೂ ಲಸಿಕೆಗೂ ಸಂಬಂಧವಿಲ್ಲ ಎಂದು ಶ್ರೀನಿವಾಸ್ ಕಕ್ಕಲಾಯಿ ಹೇಳಿದ್ದಾರೆ.
ಇದೆಲ್ಲವನ್ನು ಪರಿಶೀಲಿಸಿ ಶಾಲೆ ಆರಂಭ ಕುರಿತು ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.