ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಮೂಂದೂಡಿಕೆ
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ.
ಈ ಕುರಿತು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಮಾಹಿತಿ ನೀಡಿದ್ದು, ಜೂನ್ 21 ರಿಂದ ಪ್ರಾರಂಭವಾಗಬೇಕಿದ್ದ ಎಸ್.ಎಸ್.ಎಲ್.ಸಿ. ಪರೀಕ್ಷೆಗಳನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ.
ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವುದರಿಂದ ವಿದ್ಯಾರ್ಥಿ-ಪೋಷಕರ, ವಿವಿಧ ಶಾಲಾ ಸಂಘಟನೆಗಳ ಆತಂಕಗಳನ್ನು ಗಮನದಲ್ಲಿರಿಸಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.