ಎಸ್ ಎಸ್ ಎಲ್ ಸಿ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆ
ಬೆಂಗಳೂರು : ಕೊರೊನಾ ಹಿನ್ನೆಯಲ್ಲಿ ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಗಳನ್ನು ಎರಡು ದಿನಗಳಲ್ಲಿ ಅತ್ಯಂತ ಸರಳೀಕರಣಗೊಳಿಸಿ ನಡೆಸಲು ಇಲಾಖೆ ನಿರ್ಧರಿಸಿದೆ.
ಜುಲೈನ ಮೂರನೇ ವಾರದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯಲಿದ್ದು, ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆಯನ್ನು ಬಿಡುಗಡೆ ಮಾಡಲಾಗಿದೆ.
ಪರೀಕ್ಷಾ ಮಂಡಳಿಯ ವೆಬ್ ಸೈಟ್ www.sslc.Karnataka.gov.in ನಲ್ಲಿ ಮಾದರಿ ಪ್ರಶ್ನೆ ಪತ್ರಿಕೆಯನ್ನು ಪ್ರಕಟ ಮಾಡಲಾಗಿದೆ.
ಮೊದಲ ಪ್ರಶ್ನೆ ಪತ್ರಿಕೆ ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ವಿಷಯಗಳಾಗಿದ್ದು, ತಲಾ 40 ಅಂಕಗಳ ಒಟ್ಟು 120 ಅಂಕದ ಪ್ರಶ್ನೆ ಪತ್ರಿಕೆ ಇದಾಗಿದೆ.
ಮೂರು ಗಂಟೆಗಳ ಕಾಲ ಪರೀಕ್ಷೆ ಜರುಗಲಿದ್ದು, ಪರೀಕ್ಷೆಯಲ್ಲಿ ಎಲ್ಲ ಪ್ರಶ್ನೆಗಳು ಬಹು ಆಯ್ಕೆಯಾಗಿದೆ. ಉತ್ತರಗಳನ್ನು ಒಎಂಆರ್ ಶೀಟ್ ನಲ್ಲಿ ನಮೂದಿಸಬೇಕು.
ಒಎಂಆರ್ ಶೀಟ್ ಮಾದರಿಯೂ ಪ್ರಕಟವಾಗಿದ್ದು, ಇನ್ನೆರಡು ದಿನದಲ್ಲಿ ಮಾತೃಭಾಷೆ ಸೇರಿ ಮೂರು ವಿಷಯಗಳ ಪ್ರಶ್ನೆ ಪತ್ರಿಕೆ ಪ್ರಕಟವಾಗಲಿದೆ.
ಇನ್ನು ಮಾದರಿ ಪ್ರಶ್ನೆ ಪತ್ರಿಕೆಯನ್ನು ಬಿಡುಗಡೆಗೊಳಿಸಿರುವ ಇಲಾಖೆ ಶಿಕ್ಷಕರಿಗೂ ಈ ಕುರಿತು ಕಾರ್ಯ ಪ್ರವೃತ್ತರಾಗುವಂತೆ ಸೂಚನೆ ನೀಡಿ ವಿದ್ಯಾರ್ಥಿಗಳ ಗೊಂದಲವನ್ನು ನಿವಾರಿಸುವಂತೆ ಸಲಹೆ ನೀಡಿದ್ದಾರೆ.








