ಬೆಂಗಳೂರು, ಮೇ 19 : ಕೊರೊನಾ ಲಾಕ್ ಡೌನ್ ನಿಂದಾಗಿ ಮುಂದೂಡಲ್ಪಟ್ಟಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆ ದಿನಾಂಕ ಘೋಷಣೆಗೊಂಡಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರು ಸಂಪೂರ್ಣ ವೇಳಾಪಟ್ಟಿಯನ್ನು ಪ್ರಕಟಿಸಿದ್ದಾರೆ. ಪ್ರಸಕ್ತ ವರ್ಷ ಒಟ್ಟು 8,48,196 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಜೂನ್ 25 ರಿಂದ ಜುಲೈ 4ರವರೆಗೆ ಪರೀಕ್ಷೆ ನಡೆಯಲಿದೆ.
ಎಸ್ಎಸ್ಎಲ್ಸಿ ಪರೀಕ್ಷಾ ವೇಳಾಪಟ್ಟಿ:
ಜೂನ್ 25ರಂದು ದ್ವಿತೀಯ ಭಾಷೆ ಇಂಗ್ಲಿಷ್/ ಕನ್ನಡ
ಜೂನ್ 26ರಂದು ಅರ್ಥಶಾಸ್ತ್ರ
ಜೂನ್ 27ರಂದು ಗಣಿತ ಮತ್ತು ಸಮಾಜಶಾಸ್ತ್ರ
ಜೂ.29ರಂದು ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ- ಹಿಂದೂಸ್ತಾನಿ ಸಂಗೀತ
ಜುಲೈ 1ರಂದು ಸಮಾಜ ವಿಜ್ಞಾನ
ಜುಲೈ 2ರಂದು ಪ್ರಥಮ ಭಾಷೆ ಕನ್ನಡ, ತೆಲುಗು, ಮರಾಠಿ, ಹಿಂದಿ, ತಮಿಳು, ಉರ್ದು, ಸಂಸ್ಕೃತ, ಇಂಗ್ಲಿಷ್
ಜುಲೈ 3ರಂದು ತೃತೀಯ ಭಾಷೆಗಳಿಗೆ ಪರೀಕ್ಷೆ
ಹಿಂದಿ, ಕನ್ನಡ, ಇಂಗ್ಲಿಷ್, ಅರೆಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು ಭಾಷೆಗಳ ಪರೀಕ್ಷೆ
ಜುಲೈ 3ರಂದು NSQF ಪರೀಕ್ಷೆಗಳು ನಡೆಯಲಿದೆ.
ಇನ್ನು ಎಲ್ಲೆಲ್ಲಿ ಪರೀಕ್ಷಾ ಕೇಂದ್ರಗಳು ಆರಂಭವಾಗಲಿರುವ ಕಡೆ ಈಗಾಗಲೇ ಪರೀಕ್ಷೆಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. 2879 ಕೇಂದ್ರಗಳಲ್ಲಿ 848196 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಪರೀಕ್ಷಾ ಸಮಯ: ಬೆಳಗ್ಗೆ 10.30 ರಿಂದ ಹಾಗೂ ಮಧ್ಯಾಹ್ನ 2 ಗಂಟೆಗೆ ಆರಂಭ, ಭಾನುವಾರ ಜೂನ್ 28 ಹಾಗೂ ಮಂಗಳವಾರ ಜೂನ್ 30ರಂದು ಪರೀಕ್ಷೆ ಇರುವುದಿಲ್ಲ. ಪ್ರತಿದಿನವು ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ಮಾಡಲಾಗುತ್ತದೆ. ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ವಹಿಸಿ ಪರೀಕ್ಷೆ ಬರೆಯಲು ಆರೋಗ್ಯ ಇಲಾಖೆ ಸಹಯೋಗದೊಂದಿಗೆ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. 43720 ಕೊಠಡಿಗಳಲ್ಲಿ ಪರೀಕ್ಷೆ ಬರೆಯಲು ಸಿದ್ಧತೆ ಮಾಡಿಕೊಳ್ಳಲಾಗಿದೆ.