ಬೆಂಗಳೂರು, ಮೇ 16 : ಕೊರೋನಾ ಸೋಂಕಿನ ಕಾರಣ ಜಾರಿಯಲ್ಲಿದ್ದ ಲಾಕ್ ಡೌನ್ ಹಿನ್ನೆಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಇದೀಗ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸೋಮವಾರ ಎಸ್ ಎಸ್ ಎಲ್ ಸಿ ಪರೀಕ್ಷೆಯ ವೇಳಾಪಟ್ಟಿಯನ್ನು ಅಂತಿಮಗೊಳಿಸಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಸಚಿವ ಸುರೇಶ್ ಕುಮಾರ್ ಎಸ್ ಎಸ್ ಎಲ್ ಸಿ ಪರೀಕ್ಷೆಯ ಕುರಿತು ಮಾಹಿತಿ ನೀಡಿದ್ದು, 10ನೇ ತರಗತಿಗಳ ಪರೀಕ್ಷೆಗಳನ್ನು ಶೀಘ್ರದಲ್ಲಿ ನಡೆಸುವ ಸಲುವಾಗಿ ಶಿಕ್ಷಣ ಇಲಾಖೆಯಲ್ಲಿ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸೋಮವಾರ ಮಹತ್ವದ ಸಭೆ ನಡೆಯಲಿದ್ದು, ಆನಂತರ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸುವ ಸಾಧ್ಯತೆ ಇದೆ ಎಂದಿದ್ದಾರೆ.
ಎಪ್ರಿಲ್ ನಲ್ಲಿ ನಡೆಯಬೇಕಿದ್ದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷೆಯನ್ನು ಕೋವಿಡ್-19 ಕಾರಣದಿಂದ ಮುಂದೂಡಿಕೆ ಮಾಡಲಾಗಿತ್ತು. ವಿದ್ಯಾರ್ಥಿಗಳ ಹಿತ ಕಾಯ್ದುಕೊಂಡು, ಸೂಕ್ತ ವ್ಯವಸ್ಥೆಗಳೊಂದಿಗೆ 10ನೇ ತರಗತಿಯ ಪರೀಕ್ಷೆ ನಡೆಸಲಾಗುವುದು ಎಂದು ಸಚಿವರು ಹೇಳಿದ್ದಾರೆ.
ನಿಮ್ಮ ದಾನ ಬೇಡ, ವಿನಾಶಕ್ಕೆ ಪರಿಹಾರ ನೀಡಿ: ನಮಗೆ ನ್ಯಾಯ ಬೇಕು ಭಾರತದ ವಿರುದ್ಧ ಸಿಡಿದೆದ್ದ ನೇಪಾಳ
ಕಾಠ್ಮಂಡು: ಇತ್ತೀಚಿನ ಭೀಕರ ಪ್ರವಾಹ ಮತ್ತು ಭೂಕುಸಿತದಿಂದ ನಲುಗಿ ಹೋಗಿರುವ ನೇಪಾಳ, ಇದೀಗ ಜಗತ್ತಿನ ಬಲಿಷ್ಠ ರಾಷ್ಟ್ರಗಳ ವಿರುದ್ಧ ತಿರುಗಿಬಿದ್ದಿದೆ. ಸಾವಿರಾರು ಜೀವಗಳನ್ನು ಬಲಿಪಡೆದ ಈ ನೈಸರ್ಗಿಕ...








