SSLC Exam| ಪರೀಕ್ಷೆ ಬರೆಯಲು ಶಾಲಾ ಸಮವಸ್ತ್ರ ಕಡ್ಡಾಯ
ಬೆಂಗಳೂರು: ಮಾರ್ಚ್ 28 ರಿಂದ SSLC ಪರೀಕ್ಷೆ ಪ್ರಾರಂಭವಾಗಲಿದ್ದು, ಪರೀಕ್ಷಾ ಕೇಂದ್ರಗಳಿಗೆ ಕಡ್ಡಾಯವಾಗಿ ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿ ಹಾಜರಾಗಲೂ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಅಧಿಸೂಚನೆ ಹೊರಡಿಸಿದೆ.
ನಿಯಮ 1995ರ ನಿಯಮ 11ರಲ್ಲಿ ಪ್ರದತ್ತವಾಗಿರುವ ಅಧಿಕಾರದನ್ವಯ ಸಮವಸ್ತ್ರ ಜಾರಿ ಮಾಡಿದೆ. ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ನಿಗದಿಪಡಿಸಿರುವ ಶಾಲಾ ಸಮವಸ್ತ್ರ ಕಡ್ಡಾಯ ಮಾಡಲಾಗಿದೆ. ಇನ್ನು ಖಾಸಗಿ ಶಾಲೆಗಳಲ್ಲಿ ಆಯಾ ಆಡಳಿತ ಮಂಡಳಿಗಳು ನಿರ್ಧರಿಸಿರುವ ಸಮವಸ್ತ್ರ ಕಡ್ಡಾಯವಾಗಿ ಇರಲಿದೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಬುಕಿಲೆದ್ದಿದ್ದ ಹಿಜಾಬ್ ವಿವಾದಕ್ಕೆ ಹೈಕೋರ್ಟ್ ಮಹತ್ವದ ತೀರಪು ನೀಡಲುವ ಮೂಲಕ ತರೆ ಎಳೆದಿತ್ತು. ಹೈಕೋರ್ಟ್ ಸಮವಸ್ತ್ರ ಕಡ್ಡಾಯಗೊಳಿಸಿ ತೀರ್ಪು ನೀಡಿದೆ. ಈ ತೀರ್ಪಿನ ಅನ್ವಯ ಹಿಜಾಬ್ ಧರಿಸಿಕೊಂಡು ಬಂದರೆ ಎಸ್ಎಸ್ಎಲ್ಸಿ ಪರೀಕ್ಷಗೆ ಪ್ರವೇಶ ನಿರಾಕರಿಸಲಾಗಿದೆ.