SSLC Exam Time Table : SSLC ವಾರ್ಷಿಕ ಪರೀಕ್ಷೆಯ ಪರಿಷ್ಕೃತ ಅಂತಿಮ ವೇಳಾ ಪಟ್ಟಿ ಪ್ರಕಟ…
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ 2022 – 23 ನೇ ಸಾಲಿನ SSLC ಪರೀಕ್ಷಾ ವೇಳಾ ಪಟ್ಟಿಯ ಪರಿಷ್ಕೃತ ಮತ್ತು ಅಂತಿಮ ವೇಳಾ ಪಟ್ಟಿಯನ್ನ ಬಿಡುಗಡೆ ಮಾಡಿದೆ. ಬಿಡುಗಡೆಯಾಗಿರುವ ವೇಳಾ ಪಟ್ಟಿಯ ಪ್ರಕಾರ ದಿನಾಂಕ 31-03-2023 ರಿಂದ 15-04-2023 ರವರೆಗೆ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ತೀರ್ಮಾನಿಸಿದೆ.
ಏ.4ರಂದು ಮಹಾವೀರ ಜಯಂತಿ ರಜೆ ಹಿನ್ನೆಲೆ ವೇಳಾಪಟ್ಟಿಯಲ್ಲಿ ಕೊಂಚ ಬದಲಾವಣೆ ಮಾಡಲಾಗಿದೆ. ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯು ಪ್ರತಿದಿನ ಒಂದು ವಿಷಯಕ್ಕೆ ಮಾತ್ರ ನಡೆಯಲಿದ್ದು, ಬೆಳಿಗ್ಗೆ 10-30 ರಿಂದ ಮಧ್ಯಾಹ್ನ 01-30 ರವರೆಗೆ ಪರೀಕ್ಷೆ ನಡೆಯಲಿದೆ.
SSLC ವಿಷಯವಾರು ಪರಿಷ್ಕೃತ ಅಂತಿಮ ವೇಳಾಪಟ್ಟಿ ಈ ರೀತಿ ಇದೆ.
31-03-2023 (ಶುಕ್ರವಾರ ) ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು , ಉರ್ದು, ಇಂಗ್ಲಿಷ್, ಇಂಗ್ಲಿಷ್ (NCERT), ಸಂಸ್ಕೃತ.
03-04-2023 (ಸೋಮವಾರ) -ಗಣಿತ ಶಾಸ್ತ್ರ, ಸಮಾಜ ಶಾಸ್ತ್ರ.
06-04-2023 (ಗುರುವಾರ ) – ದ್ವಿತೀಯ ಭಾಷೆ -ಇಂಗ್ಲಿಷ್, ಕನ್ನಡ.
10-04-2023 (ಸೋಮವಾರ) – ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ.
12-04-2023 (ಬುಧವಾರ ) – ತೃತೀಯ ಭಾಷೆ- ಹಿಂದಿ, ಕನ್ನಡ, ಇಂಗ್ಲಿಷ್, ತುಳು, ಕೊಂಕಣಿ, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ..
SSLC Exam Time Table : SSLC Annual Exam Revised Final Time Table Published…








