ಮೇ 19 ರಂದು SSLC ಪರೀಕ್ಷೆ ಫಲಿತಾಂಶ – ಶಿಕ್ಷಣ ಸಚಿವ ಬಿ.ಸಿ.ನಾಗೇಶ್

1 min read
Education Minister clear about the school-college bandh in karnataka saaksha tv

ಮೇ 19 ರಂದು SSLC ಪರೀಕ್ಷೆ ಫಲಿತಾಂಶ – ಶಿಕ್ಷಣ ಸಚಿವ ಬಿ.ಸಿ.ನಾಗೇಶ್

2021-22ನೇ ಸಾಲಿನ SSLC ಪರೀಕ್ಷೆ ಫಲಿತಾಂಶವನ್ನು ಇದೇ ತಿಂಗಳ 19ರಂದು ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

ಕರ್ನಾಟಕದಲ್ಲಿ ಮಾರ್ಚ್​ 28ರಿಂದ ಏಪ್ರಿಲ್​ 11ರವರೆಗೆ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆದಿತ್ತು. ಈ ಮೊದಲು ಮೇ 15ರಂದು ಫಲಿತಾಂಶ ಪ್ರಕಟಿಸುವುದಾಗಿ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಚಿಂತನೆ ನಡೆಸಿತ್ತು. ಆದರೆ ಸಾಲುಸಾಲು ರಜೆಗಳ ಹಿನ್ನೆಲೆಯಲ್ಲಿ ಫಲಿತಾಂಶದ ದಿನಾಂಕವನ್ನು ಮುಂದೂಡಲಾಗಿದೆ.

ಕೊಡಗಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, SSLC ಫಲಿತಾಂಶ ಪ್ರಕಟಣೆಗೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು. ಅಲ್ಲದೆ, ಇದೇ 16ರಿಂದ ರಾಜ್ಯಾದ್ಯಂತ ಕಲಿಕಾ ಚೇತರಿಕೆ ಕಾರ್ಯಕ್ರಮ ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತುಮಕೂರಿನಲ್ಲಿ ಇದಕ್ಕೆ ಚಾಲನೆ ನೀಡಲಿದ್ದಾರೆ ಎಂದರು.

ಕೊಡಗು ಜಿಲ್ಲೆಯಲ್ಲಿ ಕಳೆದ ಐದು ವರ್ಷದಿಂದ ಸತತವಾಗಿ ಪ್ರವಾಹ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಮಳೆಗಾಲಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ಸಭೆ ಕರೆಯಲಾಗಿದೆ. ಇದರ ಜತೆಗೆ ಎರಡು ತಾಲೂಕುಗಳಲ್ಲಿ ಪ್ರಗತಿ ಪರಿಶೀಲನಾ ಸಭೆಯನ್ನೂ ನಡೆಸಲಾಗುವುದು ಎಂದು ತಿಳಿಸಿದರು.

Leave a Reply

Your email address will not be published.

YOU MUST READ

Copyright © All rights reserved | SaakshaTV | JustInit DigiTech Pvt Ltd