ಕರಾವಳಿಯಲ್ಲಿ ಸುಭಿಕ್ಷವಾಗಿ ಆರಂಭಗೊಂಡ SSLC ಪರೀಕ್ಷೆ
ಮಂಗಳೂರು: ಇಂದಿನಿಂದ ರಾಜ್ಯಾದ್ಯಂತ SSLC ಪರೀಕ್ಷೆ ಪ್ರಾರಂಭವಾಗಿದ್ದು, ಕರಾವಳಿ ಮಂಗಳೂರಿನಲ್ಲಿ 42 ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ.
ಮೊದಲ ದಿನದ ಪರೀಕ್ಷೆ ಈಗಾಗಲೇ ಆರಂಭವಾಗಿದೆ. ದ.ಕ.ಜಿಲ್ಲೆಯಲ್ಲಿ ಒಟ್ಟು 29,712 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಇವರಲ್ಲಿ 15,615 ಬಾಲಕರು, 14097 ಬಾಲಕಿಯರು ಇಂದು ಪರೀಕ್ಷೆ ಬರೆಯುತ್ತಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಪರೀಕ್ಷಾ ಕೇಂದ್ರದ 100 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಯಾವುದೇ ಗೊಂದಲಗಳಿಲ್ಲದೇ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಸುಭೀಕ್ಷವಾಗಿ ನಡೆಯುತ್ತಿದ್ದು, ಸರ್ಕಾರಿ ಶಾಲೆಯ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶವಿಲ್ಲ ನೀಡಿಲ್ಲ.
ಆದರೆ ಖಾಸಗಿ ಶಾಲೆಗಳಲ್ಲಿ ಸಮವಸ್ತ್ರದ ಭಾಗವಾಗಿ ಹಿಜಾಬ್ ಧರಿಸುತ್ತಿದ್ದ ವಿದ್ಯಾರ್ಥಿಗಳಿಗೆ ಹಿಜಾಬ್ ಧರಿಸಿಯೇ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ.