ADVERTISEMENT
Wednesday, February 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಜನವರಿ 1ರಿಂದ ಎಸ್‍ಎಸ್‍ಎಲ್‍ಸಿ, ಪಿಯುಸಿ ಕ್ಲಾಸ್ ಓಪನ್: ಸುರೇಶ್‍ಕುಮಾರ್ ಸ್ಪಷ್ಟನೆ

Kariyappa N by Kariyappa N
December 23, 2020
in Newsbeat, Politics, Samagra karnataka, ರಾಜ್ಯ
schools
Share on FacebookShare on TwitterShare on WhatsappShare on Telegram

ಬೆಂಗಳೂರು: ರೂಪಾಂತರ ಹೊಂದಿರುವ ಲಂಡನ್ ಕೊರೊನಾ ಭೀತಿಯ ನಡುವೆಯೂ ಎಸ್‍ಎಸ್‍ಎಲ್‍ಸಿ, ದ್ವಿತೀಯ ಪಿಯುಸಿ ತರಗತಿಗಳನ್ನು ನಿಗದಿಯಂತೆ ಜನವರಿ 1ರಿಂದ ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಬೆಂಗಳೂರಿನಲ್ಲಿಂದು ಶಿಕ್ಷಣ ಇಲಾಖೆ ಅಧಿಕಾರಿಗಳು, ಎಲ್ಲಾ ಜಿಲ್ಲೆಗಳ ಜಿಲ್ಲಾ ಪಂಚಾಯಿತಿ ಸಿಇಒ ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಶಿಕ್ಷಣ ಸಚಿವ ಸುರೇಶ್ ಕುಮಾರ್, ಬಿಗಿ ಕಟ್ಟೆಚ್ಚರದೊಂದಿಗೆ 10 ಹಾಗೂ 12ನೇ ತರಗತಿಗಳು ಆರಂಭವಾಗಲಿವೆ. ಈ ವಿಚಾರದಲ್ಲಿ ಪೋಷಕರಲ್ಲಿ ಗೊಂದಲ ಬೇಡ ಎಂದು ತಿಳಿಸಿದ್ದಾರೆ.

suresh kumar
ಲಂಡನ್ ಕೊರೊನಾ ಭೀತಿಯ ಬಗ್ಗೆ ಹೆಚ್ಚು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ತಿಳಿಸಿದ್ದಾರೆ. ಈ ವೈರಸ್ ಬಗ್ಗೆ ತಜ್ಞರಿಂದ ಪ್ರತಿದಿನ ಅಭಿಪ್ರಾಯ ಪಡೆದು ಅದರ ಅನುಸಾರವಾಗಿ ಕ್ರಮಗಳನ್ನು ಕೈಗೊಳ್ಳಳಾಗುವುದು ಎಂದು ಸುರೇಶ್‍ಕುಮಾರ್ ಭರವಸೆ ನೀಡಿದ್ದಾರೆ.
ಇನ್ನೊಂದು ವಾರದಲ್ಲಿ ಎಸ್‍ಎಸ್‍ಎಲ್, ದ್ವಿತೀಯ ಪಿಯುಸಿ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟವಾಗಲಿದೆ. ಜತೆಗೆ ಸಿಲಬಸ್ ಕೂಡ ಇದೇ ವಾರದಲ್ಲಿ ಬಿಡುಗಡೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

Related posts

To get good marks in exams, chant this one-line mantra in the ears of your children every day

ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಕ್ಕಳ ಕಿವಿಯಲ್ಲಿ ಪ್ರತಿದಿನ ಈ ಒಂದು ಸಾಲಿನ ಮಂತ್ರವನ್ನು ಪಠಿಸಿ. ದಡ್ಡ ಮಕ್ಕಳನ್ನೂ ಅಧ್ಯಯನದಲ್ಲಿ ಉತ್ಕೃಷ್ಟಗೊಳಿಸಲು ಪ್ರಬಲ ಮಂತ್ರ.

February 11, 2026
ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ಕುರಿತು ಸ್ಪೀಕರ್ ಏನು ಹೇಳಿದರು?

ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ಕುರಿತು ಸ್ಪೀಕರ್ ಏನು ಹೇಳಿದರು?

February 11, 2026

ಸಭೆಯ ಪ್ರಮುಖ ಅಂಶಗಳು..
* ಶಾಲೆ ಆರಂಭ ಕೇವಲ ಶಿಕ್ಷಣ ಇಲಾಖೆ ಕಾರ್ಯ ಮಾತ್ರವಲ್ಲ, ಎಲ್ಲಾ ಇಲಾಖೆಗಳು, ಜಿಲ್ಲಾಧಿಕಾರಿಗಳ ಜವಾಬ್ದಾರಿ
* ಎಸ್‍ಎಸ್‍ಎಲ್‍ಸಿ, ಪಿಯುಸಿಗೆ ಬೋರ್ಡ್ ಪರೀಕ್ಷೆ ಇರುವುದರಿಂದ ತರಗತಿ ಆರಂಭಿಸೋಣ
* ಇನ್ನೊಂದು ವಾರದಲ್ಲಿ ಪರೀಕ್ಷಾ ದಿನಾಂಕ, ಸಿಲಬಸ್ ಪ್ರಕಟ
* ಬಾಲ ಕಾರ್ಮಿಕ ಪದ್ದತಿ ಹೆಚ್ಚುತ್ತಿರುವ ಹಿನ್ನೆಲೆ ತರಗತಿ ಆರಂಭಿಸೋಣ
* ಶಾಲೆಗಳಲ್ಲಿ ಸಾಮಾಜಿಕ ಅಂತರ, ಕೋವಿಡ್ ನಿಯಮ ಪಾಲನೆ ಕಡ್ಡಾಯ
* ಒಂದು ತರಗತಿಯಲ್ಲಿ 15 ವಿದ್ಯಾರ್ಥಿಗಳು ಕುಳಿತುಕೊಳ್ಳಲು ವ್ಯವಸ್ಥೆ
* ಮಕ್ಕಳು ಶಾಲೆಗೆ ಬರಬೇಕೆಂದರೆ ಪೋಷಕರ ಅನುಮತಿ ಪತ್ರ ಕಡ್ಡಾಯ
* ಆರೋಗ್ಯ ಸಮಸ್ಯೆ ಇದ್ದರೆ ಮಕ್ಕಳು ಶಾಲೆಯಿಂದ ದೂರ ಇರಬೇಕು
* ಶೈಕ್ಷಣಿಕ ಸಂಚಲನ ಆಗಬೇಕೆಂದರೆ ಜಿಲ್ಲಾಧಿಕಾರಿಗಳ ಪಾತ್ರ ಮುಖ್ಯ
* ಪೋಷಕರಲ್ಲಿ ಧೈರ್ಯ ತುಂಬುವ ಕೆಲಸವನ್ನು ಜಿಲ್ಲಾಧಿಕಾರಿಗಳು, ಜಿಪಂ ಸಿಇಒಗಳು ಮಾಡಬೇಕು
* ವಿದ್ಯಾರ್ಥಿಗಳ ಬಸ್ ವ್ಯವಸ್ಥೆ ಮಾಡುವುದು ಡಿಸಿಗಳ ಜವಾಬ್ದಾರಿ
* ಮಧ್ಯಾಹ್ನದ ಬಿಸಿಯೂಟ ಇರುವುದಿಲ್ಲ, ಮನೆಯಿಂದಲೇ ಮಕ್ಕಳು ತರಬೇಕು
* ಶಾಲೆಗಳಲ್ಲಿ ಕುಡಿಯಲು ಬಿಸಿ ನೀರಿನ ವ್ಯವಸ್ಥೆ ಮಾಡಬೇಕು
* ಎಲ್ಲಾ ಶಾಲೆಗಳಲ್ಲಿ ಐಸೋಲೇಶನ್ ಕೊಠಡಿ ಇರಬೇಕು

ಜನವರಿ 1ಕ್ಕೆ ಬದಲು ಜ.14ರಿಂದ ವಿದ್ಯಾಗಮ
ಜನವರಿ 1ರಿಂದಲೇ 6ರಿಂದ 9ನೇ ತರಗತಿಯ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ವಿದ್ಯಾಗಮ ಆರಂಭಿಸಲು ಕಳೆದ ವಾರ ತೀರ್ಮಾನಿಸಲಾಗಿತ್ತು. ಆದರೆ, ಇಂದು ನಡೆದ ಸಭೆಯಲ್ಲಿ ಜನವರಿ 14ರಿಂದ ವಿದ್ಯಾಗಮ ತರಗತಿ ಆರಂಭಿಸಲಾಗುವುದು. ಕೊರೊನಾ ಮುನ್ನೆಚ್ಚರಿಕೆಗಳ ಬಗ್ಗೆ ತಜ್ಞರಿಂದ ಪ್ರತಿದಿನದ ಮಾಹಿತಿ ಆಧರಿಸಿ ವಿದ್ಯಾಗಮ ತರಗತಿಗಳು ಆರಂಭವಾಗಲಿವೆ. ಮೊದಲು ನಿರ್ಣಯ ಮಾಡಿದಂತೆ ಶಾಲಾ ಕೊಠಡಿ ಬದಲು ಕೊಠಡಿ ಹೊರಗೆ ವಿದ್ಯಾಗಮ ತರಗತಿ ನಡೆಸಲು ನಿರ್ಧರಿಸಲಾಗಿದೆ. ಜತೆಗೆ ಚಂದನ ವಾಹಿನಿಯಲ್ಲಿ ಸಂವೇದ ತರಗತಿಗಳು ಮುಂದುವರೆಯಲಿವೆ ಎಂದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: colleges reopencorona 2nd wavejanuaryLondon corona virusSchoolsuresh kumarvidyagama
ShareTweetSendShare
Join us on:

Related Posts

To get good marks in exams, chant this one-line mantra in the ears of your children every day

ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಕ್ಕಳ ಕಿವಿಯಲ್ಲಿ ಪ್ರತಿದಿನ ಈ ಒಂದು ಸಾಲಿನ ಮಂತ್ರವನ್ನು ಪಠಿಸಿ. ದಡ್ಡ ಮಕ್ಕಳನ್ನೂ ಅಧ್ಯಯನದಲ್ಲಿ ಉತ್ಕೃಷ್ಟಗೊಳಿಸಲು ಪ್ರಬಲ ಮಂತ್ರ.

by admin
February 11, 2026
0

ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಕ್ಕಳ ಕಿವಿಯಲ್ಲಿ ಪ್ರತಿದಿನ ಈ ಒಂದು ಸಾಲಿನ ಮಂತ್ರವನ್ನು ಪಠಿಸಿ. ದಡ್ಡ ಮಕ್ಕಳನ್ನೂ ಅಧ್ಯಯನದಲ್ಲಿ ಉತ್ಕೃಷ್ಟಗೊಳಿಸಲು ಪ್ರಬಲ ಮಂತ್ರ. ನಾವು ನಮ್ಮ...

ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ಕುರಿತು ಸ್ಪೀಕರ್ ಏನು ಹೇಳಿದರು?

ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ಕುರಿತು ಸ್ಪೀಕರ್ ಏನು ಹೇಳಿದರು?

by Shwetha
February 11, 2026
0

ತಮ್ಮ ವಿರುದ್ಧ ಪ್ರತಿಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯಕ್ಕೆ ಸಂಬಂಧಿಸಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಪ್ರತಿಕ್ರಿಯೆ ನೀಡಿದ್ದಾರೆ. ಅವಿಶ್ವಾಸ ನಿರ್ಣಯದ ನೋಟಿಸ್‌ನ್ನು ಪ್ರಾಥಮಿಕವಾಗಿ ಪರಿಶೀಲಿಸಿದ ಬಳಿಕ, ಮುಂದಿನ...

ಪ್ಯಾನ್ ಕಾರ್ಡ್ ಬಳಕೆದಾರರೇ ಗಮನಿಸಿ: ನಗದು  ಏಪ್ರಿಲ್ 1ರಿಂದ ನಗದು ವ್ಯವಹಾರ ಮತ್ತು ಮಿತಿಯಲ್ಲಿ ಭಾರೀ ಬದಲಾವಣೆ

ಪ್ಯಾನ್ ಕಾರ್ಡ್ ಬಳಕೆದಾರರೇ ಗಮನಿಸಿ: ನಗದು ಏಪ್ರಿಲ್ 1ರಿಂದ ನಗದು ವ್ಯವಹಾರ ಮತ್ತು ಮಿತಿಯಲ್ಲಿ ಭಾರೀ ಬದಲಾವಣೆ

by Shwetha
February 11, 2026
0

ನವದೆಹಲಿ: ಆದಾಯ ತೆರಿಗೆ ಪಾವತಿದಾರರಿಗೆ ಮತ್ತು ಸಾಮಾನ್ಯ ಜನರಿಗೆ ಕೇಂದ್ರ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡುವ ಸಾಧ್ಯತೆಯಿದೆ. ಬ್ಯಾಂಕ್ ವಹಿವಾಟು, ವಾಹನ ಖರೀದಿ, ಮತ್ತು ಹೋಟೆಲ್...

ನ್ಯಾಯಾಂಗವನ್ನು ರಾಜಕೀಯ ವಿವಾದಗಳ ವೇದಿಕೆ ಮಾಡಬೇಡಿ: ಸಿಜೆಐ

ನ್ಯಾಯಾಂಗವನ್ನು ರಾಜಕೀಯ ವಿವಾದಗಳ ವೇದಿಕೆ ಮಾಡಬೇಡಿ: ಸಿಜೆಐ

by Shwetha
February 11, 2026
0

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಶ್ವ ಶರ್ಮ ಅವರ ಗನ್ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಬೇಕು ಎಂದು ಕಮ್ಯುನಿಸ್ಟ್ ಪಕ್ಷಗಳು ಸಲ್ಲಿಸಿದ್ದ ಅರ್ಜಿಗೆ ಸುಪ್ರೀಂ ಕೋರ್ಟ್ ತೀವ್ರ...

ದೆಹಲಿಯಲ್ಲಿ ದೋಸ್ತಿ ಕರುನಾಡಿನಲ್ಲಿ ಕುಸ್ತಿ: ಮೈತ್ರಿ ವಿರುದ್ಧ ಸಿಡಿದೆದ್ದ ಕಮಲ ಕಲಿಗಳು

ದೆಹಲಿಯಲ್ಲಿ ದೋಸ್ತಿ ಕರುನಾಡಿನಲ್ಲಿ ಕುಸ್ತಿ: ಮೈತ್ರಿ ವಿರುದ್ಧ ಸಿಡಿದೆದ್ದ ಕಮಲ ಕಲಿಗಳು

by Shwetha
February 11, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಆಡಳಿತರೂಢ ಕಾಂಗ್ರೆಸ್ ಪಕ್ಷವನ್ನು ಮಣಿಸಲು ಒಂದಾಗಿರುವ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟದಲ್ಲಿ, ಒಗ್ಗಟ್ಟಿನ ಮಂತ್ರಕ್ಕಿಂತ ಭಿನ್ನಮತದ ರಾಗವೇ ಜೋರಾಗಿ ಕೇಳಿಬರುತ್ತಿದೆ. 2028ರ ವಿಧಾನಸಭಾ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram