ಎಸ್ ಎಸ್ ಎಲ್ ಸಿ, ಪಿಯುಸಿ ಪರೀಕ್ಷೆ ರದ್ದತಿ ಬಗ್ಗೆ ತೀರ್ಮಾನ ತೆಗೆದುಕೊಂಡಿಲ್ಲ sslc
ಬೆಂಗಳೂರು : ಕೊರೊನಾ ಸೋಂಕಿನಿಂದ ಮುಂದೂಡಿರುವ ಎಸ್ ಎಸ್ ಎಲ್ ಸಿ, ದ್ವಿತೀಯ ಪಿಯು ಪರೀಕ್ಷೆ ರದ್ದತಿಯ ಬಗ್ಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಈ ಸಂಬಂಧ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ರಾಜ್ಯದಲ್ಲಿ ಕೊರೊನಾ ತೀವ್ರ ಪ್ರಸರಣದಿಂದಾಗಿ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಮುಂದೂಡಲಾಗಿರುವ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯು ಪರೀಕ್ಷೆಗಳನ್ನು ರದ್ದುಪಡಿಸುವ ಬಗ್ಗೆ ಸದ್ಯಕ್ಕೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ.
ಕೆಲ ಮಾಧ್ಯಮಗಳು ಪರೀಕ್ಷೆ ರದ್ದತಿ ಬಗ್ಗೆ ಪ್ರಸಾರ ಮಾಡುತ್ತಿದ್ದು, ಅದು ಸತ್ಯಕ್ಕೆ ದೂರವಾದದ್ದು. ಕೆಲವು ಮಾಧ್ಯಮಗಳ ಸುದ್ದಿ ಊಹಾಪೋಹವಷ್ಟೇ.
ವಿದ್ಯಾರ್ಥಿಗಳ ಭವಿಷ್ಯ ಹಾಗೂ ಯೋಗಕ್ಷೇಮವನ್ನು ಗಮನದಲ್ಲಿರಿಸಿ ಮುಂದಿನ ದಿನಗಳಲ್ಲಿ ಅವರ ಒಳಿತಿಗೆ ಪೂರಕವಾದ ನಿರ್ಣಯ ತೆಗೆದುಕೊಳ್ಳಲಾಗುವುದು. ಯಾವುದೇ ಕಾರಣಕ್ಕೂ ವಿಚಲಿತರಾಗದೇ ವಿದ್ಯಾರ್ಥಿಗಳು ಓದಿನಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.