ಬೆಂಗಳೂರು : ಕೊರೊನಾ ಸೋಂಕು ಇಡೀ ವಿಶ್ವವನ್ನೇ ಆತಂಕಕ್ಕೆ ದೂಡಿದೆ. ಸೋಂಕು ಹರಡುವಿಕೆಯನ್ನು ತಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಲವು ರೀತಿಯ ಕ್ರಮಗಳನ್ನು ತೆಗೆದುಕೊಂಡಿದೆ. ಈಗಾಗಲೇ ಹಲವು ಸೇವೆಗಳು ಸ್ಥಗಿತಗೊಂಡಿದ್ದು, 1 ರಿಂದ 6 ನೇ ತರಗತಿಗಳ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ. ಏತನ್ಮಧ್ಯೆ, ಎಸ್.ಎಸ್.ಎಲ್.ಸಿ, ಪಿಯುಸಿ ಪರೀಕ್ಷೆಗಳು ನಿಗದಿತ ವೇಳಾಪಟ್ಟಿಯಂತೆ ನಡೆಯಲಿವೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸುರೇಶ್ ಕುಮಾರ್ ಅವರು, ಎಸ್ ಎಸ್ ಎಲ್ ಸಿ ಪರೀಕ್ಷೆಗಳ ವೇಳಾಪಟ್ಟಿಯಲ್ಲಿ ಬದಲಾವಣೆ ಇಲ್ಲ. ಪಿಯುಸಿ ಪರೀಕ್ಷೆಗಳು ಸಹ ಟೈಮ್ ಟೇಬಲ್ ನಂತೆಯೇ ನಡೆಯಲಿವೆ ಎಂದು ಸ್ಪಷ್ಟಪಡಿಸಿದ್ದಾರೆ.
ಕೊರೊನಾ ಭೀತಿ ಹೆಚ್ಚಾಗುತ್ತಿರುವ ಹಿನ್ನೆಲೆ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಗಳ ಕುರಿತು ವಿದ್ಯಾರ್ಥಿಗಳಲ್ಲಿ ಗೊಂದಲ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಸಚಿವ ಸುರೇಶ್ ಕುಮಾರ್ ನಿಗದಿತ ವೇಳಾಪಟ್ಟಿಯಂತೆ ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಗಳು ನಡೆಯಲಿವೆ ಎಂದು ತಿಳಿಸಿದ್ದಾರೆ.








