ಬೆಂಗಳೂರು : ಕೊರೊನಾ ಕಾಟದ ನಡುವೆ ಜೂನ್ ಜುಲೈನಲ್ಲಿ ನಡೆದ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ. ಪರೀಕ್ಷೆ ಬರೆದ ಒಟ್ಟು 8,11,050 ವಿದ್ಯಾರ್ಥಿಗಳ ಪೈಕಿ 5,82,316 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ.71.80 ಫಲಿತಾಂಶ ದಾಖಲಾಗಿದೆ. ಈ ಬಾರಿ 2,24,734 ವಿದ್ಯಾರ್ಥಿಗಳು ಅನುತ್ತೀರ್ಣಗೊಂಡಿದ್ದಾರೆ.
ಇಂದು ಮಧ್ಯಾಹ್ನ ಮೂರು ಗಂಟೆಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ಫಲಿತಾಂಶದ ವಿವರವನ್ನು ಪ್ರಕಟಿಸಿದರು. ಎಂದಿನಂತೆ ಈ ಬಾರಿಯೂ ಕೂಡ ಬಾಲಕಿಯರೇ ಹೆಚ್ಚಿನ ಸಂಖ್ಯೆಯಲ್ಲಿ ತೇರ್ಗಡೆಯಾಗಿದ್ದಾರೆ. ಶೇ. 77.74 ಬಾಲಕಿಯರು ತೇರ್ಗಡೆಯಾಗಿದ್ದರೆ, ಶೇ. 66.41 ಬಾಲಕರು ತೇರ್ಗಡೆಯಾಗಿದ್ದಾರೆ. ಈ ಬಾರಿ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಮೊದಲ ಸ್ಥಾನ ಪಡೆದಿದೆ.
ಈ ಬಗ್ಗೆ ಚಿಕ್ಕಬಳ್ಳಾಪುರ ಶಾಸಕ, ವೈಧ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಅವರು ಟ್ವಿಟ್ಟರ್ ನಲ್ಲಿ ಜಿಲ್ಲೆಯ ಶಿಕ್ಷಕರಿಗೆ, ವಿದ್ಯಾರ್ಥಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಸುಧಾಕರ್ ಟ್ವೀಟ್ ನಲ್ಲಿ, ” ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಇಡೀ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿರಿವುದು ಹೆಮ್ಮೆಯ ಸಂಗತಿ. ಚಿಕ್ಕಬಳ್ಳಾಪುರದ ಶಾಸಕನಾಗಿ, ಜಿಲ್ಲಾ ಉಸ್ತುವಾರಿ ಸಚಿವನಾಗಿ ಇದು ಅತೀವ ಸಂತಸ ತಂದಿದೆ. ಜಿಲ್ಲೆಯ ಎಲ್ಲಾ ವಿದ್ಯಾರ್ಥಿಗಳಿಗೆ, ಪೋಷಕರಿಗೆ,ಶಿಕ್ಷಕರಿಗೆ ಮತ್ತು ಜಿಲ್ಲಾಡಳಿತಕ್ಕೆ ನನ್ನ ವಿಶೇಷ ಅಭಿನಂದನೆಗಳು ಎಂದು ಬರೆದುಕೊಂಡಿದ್ದಾರೆ.
https://twitter.com/mla_sudhakar/status/1292762268606713856?s=20