SSLC RESULT – ನಾಳೆ ಮಧ್ಯಾಹ್ನ 12.30 ಕ್ಕೆ SSLC ಫಲಿತಾಂಶ ಪ್ರಕಟ…
ನಾಳೆ 2021 -22 ಸಾಲಿನ SSLC ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಬಿ.ಸಿ. ನಾಗೇಶ್ ಅವರು ಮಲ್ಲೇಶ್ವರಂದಲ್ಲಿರುವ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಕಚೇರಿಯಲ್ಲಿ ಮಧ್ಯಾಹ್ನ 12.30ಕ್ಕೆ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಿದ್ದಾರೆ.
ಮಾರ್ಚ್ 28 ರಿಂದ ಏಪ್ರಿಲ್ 11 ರವರೆಗೆ ಮಾರ್ಚ್ /ಏಪ್ರಿಲ್ 2022 ರ ಎಸ್ಎಸ್ಎಲ್ಸಿ ಮುಖ್ಯ ಪರೀಕ್ಷೆಯನ್ನ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿತ್ತು.
ಇದನ್ನ ಓದಿ – ನಾಳೆ SSLC ಫಲಿತಾಂಶ, ರಿಸಲ್ಟ್ ಚೆಕ್ ಮಾಡಲು ಹಂತ ಹಂತದ ವಿವರಗಳು ಇಲ್ಲಿವೆ..
ಮಧ್ಯಾಹ್ನ 1 ಗಂಟೆ ನಂತರ ಇಲಾಖೆಯ ವೆಬ್ಸೈಟ್ karresults.nic.in ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ನಾಳೆ ಮಧ್ಯಾಹ್ನ ಆಯಾ ಶಾಲೆಗಳಲ್ಲೂ ಫಲಿತಾಂಶ ಪ್ರಕಟಿಸಲಾಗುತ್ತದೆ. ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್ಗಳಿಗೆ ಎಸ್ಎಂಎಸ್ ಮೂಲಕ ಫಲಿತಾಂಶ ಕಳುಹಿಸಲಾಗುತ್ತದೆ.
ಈ ಬಾರಿ ರಾಜ್ಯದಲ್ಲಿ ಎಸ್ಎಸ್ಎಲ್ಸಿ ಮುಖ್ಯ ಪರೀಕ್ಷೆಗೆ 15,387 ಶಾಲೆಗಳಿಂದ ಒಟ್ಟು 8,73,884 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಅದರಲ್ಲಿ 4,52,732 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರೆ, 4,21,110 ವಿದ್ಯಾರ್ಥಿನಿಯರು ಮತ್ತು 4 ತೃತೀಯ ಲಿಂಗಿ ವಿದ್ಯಾರ್ಥಿಗಳು ಸೇರಿದಂತೆ ವಿಭಿನ್ನ ಸಾಮರ್ಥ್ಯವುಳ್ಳ 5,307 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು.