ಬೆಂಗಳೂರು : ಕೊರೊನಾ ಕಾಟದ ನಡುವೆ ಜೂನ್ ಜುಲೈನಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ. ಪರೀಕ್ಷೆ ಬರೆದ ಒಟ್ಟು 8,11,050 ವಿದ್ಯಾರ್ಥಿಗಳ ಪೈಕಿ 5,82,316 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ.71.80 ಫಲಿತಾಂಶ ದಾಖಲಾಗಿದೆ. ಈ ಬಾರಿ 2,24,734 ವಿದ್ಯಾರ್ಥಿಗಳು ಅನುತ್ತೀರ್ಣಗೊಂಡಿದ್ದಾರೆ.
ಇಂದು ಮಧ್ಯಾಹ್ನ ಮೂರು ಗಂಟೆಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ಫಲಿತಾಂಶದ ವಿವರವನ್ನು ಪ್ರಕಟಿಸಿದರು. ಎಂದಿನಂತೆ ಈ ಬಾರಿಯೂ ಕೂಡ ಬಾಲಕಿಯರೇ ಹೆಚ್ಚಿನ ಸಂಖ್ಯೆಯಲ್ಲಿ ತೇರ್ಗಡೆಯಾಗಿದ್ದಾರೆ. ಶೇ. 77.74 ಬಾಲಕಿಯರು ತೇರ್ಗಡೆಯಾಗಿದ್ದರೆ, ಶೇ. 66.41 ಬಾಲಕರು ತೇರ್ಗಡೆಯಾಗಿದ್ದಾರೆ.
19,086 ಮಂದಿ ಹಾಜರಾತಿ ಕೊರತೆಯಿಂದ ಪರೀಕ್ಷೆ ಬರೆಯದಿದ್ದರೆ, 8,067 ವಿದ್ಯಾರ್ಥಿಗಳು ಪೂರಕ ಪರೀಕ್ಷೆ ಬರೆಯಲಿದ್ದಾರೆ. ಈ ಬಾರಿ 6 ಮಂದಿ 625 ಅಂಕ ಪಡೆದಿದ್ದಾರೆ. ಈ ಬಾರಿ ಚಿಕ್ಕಬಳ್ಳಾಪುರ ಪ್ರಥಮ ಸ್ಥಾನ ಪಡೆದಿದ್ದರೆ, ಯಾದಗಿರಿ ಕೊನೆಯ ಸ್ಥಾನವನ್ನು ಪಡೆದಿದೆ.
ವಿದ್ಯಾರ್ಥಿಗಳು www.kseeb.kar.nic.in ಮತ್ತು www.karresults.nic.in ವೆಬ್ ಸೈಟ್ ಗಳಲ್ಲಿ ಫಲಿತಾಂಶವನ್ನು ನೋಡಬಹುದು.









