ಚಾಮರಾಜನಗರ : ಸೋಮವಾರ 2019-20 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದೆ. ಇದರಲ್ಲಿ ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲದ ಸರ್ಕಾರಿ ಆದರ್ಶ ವಿದ್ಯಾಲಯದ ವಿದ್ಯಾರ್ಥಿನಿಯರು ಇಡೀ ಜಿಲ್ಲೆಗೆ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆಯುವುದರ ಮೂಲಕ ಜಿಲ್ಲೆ ಹಾಗೂ ಶಾಲೆಗೆ ಕೀರ್ತಿ ತಂದಿದ್ದಾರೆ.
ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ಪಟ್ಟಣ ಠಾಣೆಯಲ್ಲಿ ಪೊಲೀಸ್ ಪೇದೆಯಾಗಿ ಕಾರ್ಯ ನಿರ್ವಹಿಸುತ್ತಿರುವ ಮಹೇಶ್ ಎಂಬುವವರ ಪುತ್ರಿ ಮೇಘನಾ.ಎಂ. 621 ಅಂಕ ಗಳಿಸುವುದರ ಮೂಲಕ ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿದ್ದರೆ, 619 ಅಂಕ ಗಳಿಸಿ ದ್ವಿತೀಯ ಸ್ಥಾನವನ್ನು ಯಶಸ್ವಿನಿ ಎಂಬ ವಿದ್ಯಾರ್ಥಿನಿ ಪಡೆದುಕೊಂಡು ಕೀರ್ತಿ ತಂದಿದ್ದಾರೆ.
ಈ ವಿದ್ಯಾಥಿ9ಗಳಿಗೆ ಆದರ್ಶ ಶಾಲೆಯ ಆಡಳಿತ ಮಂಡಲಿ ಅಭಿನಂದನೆ ಸಲ್ಲಿಸುವುದರ ಮೂಲಕ ಗೌರವ ಸಲ್ಲಿಸಿದರು.