ಇಂದು 2021ರ ಸಾಲಿನ SSLC ಪರೀಕ್ಷೆ ಫಲಿತಾಂಶ ಪ್ರಕಟ – ರಿಸಲ್ಟ್ ನೋಡುವುದು ಹೇಗೆ..?
2021ನೇ ಸಾಲಿನ ರಾಜ್ಯ SSLC ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಲಿದೆ.. ಇಂದು ಮಧ್ಯಾಹ್ನ 03. 30ರ ಸುಮಾರಿಗೆ ಫಲಿತಾಂಶ ಪ್ರಕಟವಾಗಲಿದೆ. ನೂತನ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ರವರು ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ, ಫಲಿತಾಂಶ ಪ್ರಕಟಿಸಲಿದ್ದಾರೆ.
ಕೊರೊನಾ 2ನೇ ಅಲೆ ಹಿನ್ನೆಲೆಯಲ್ಲಿ ಕೇಂದ್ರ ಪ್ರೌಢಶಿಕ್ಷಣ ಮಂಡಳಿಯು 10ನೇ ತರಗತಿ ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ರದ್ದುಗೊಳಿಸಿ, ಪರ್ಯಾಯ ಮೌಲ್ಯಮಾಪನದ ಆಧಾರದಲ್ಲಿ ಫಲಿತಾಂಶ ಪ್ರಕಟಿಸಿದೆ. ಕರ್ನಾಟಕ ರಾಜ್ಯದಲ್ಲಿಯೂ ಸಹ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ರದ್ದುಗೊಳಿಸಿ ಪರ್ಯಾಯ ಮೌಲ್ಯಮಾಪನದ ಆಧಾರದಲ್ಲಿ ರಿಸಲ್ಟ್ ಬಿಡುಗಡೆ ಮಾಡಲಾಗಿದೆ. ಆದರೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಮಾತ್ರ ವಿರೋಧದ ನಡುವೆಯೇ ಶಿಕ್ಷಣ ಇಲಾಖೆ ಎರಡನೇ ದಿನ ಹೊಸ ಮಾದರಿಯಲ್ಲಿ ಪರೀಕ್ಷೆಯನ್ನು ಜುಲೈ 19, 22 ರಂದು ನಡೆಸಿತ್ತು.
ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ತಮ್ಮ ರಿಜಿಸ್ಟರ್ ನಂಬರ್ ಮೂಲಕ ಫಲಿತಾಂಶ ಚೆಕ್ ಮಾಡಬಹುದಾಗಿದೆ. 3.30ರ ಸುಮಾರಿಗೆ ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಅಫೀಶಿಯಲ್ ವೆಬ್‌ಸೈಟ್ sslc.karnataka.gov.in / karresults.nic.in ಗೆ ಭೇಟಿ ನೀಡಿ ಫಲಿತಾಂಶ ಚೆಕ್ ಮಾಡಬಹುದು.
ಬೆಂಗ್ಳೂರಲ್ಲಿ ಕೊರೊನಾ ಹೆಚ್ಚಳ : ಮತ್ತೆ ಟಫ್ ರೂಲ್ಸ್, ಲಾಕ್ ಡೌನ್..?
SSLC ರಿಸಲ್ಟ್ ಚೆಕ್ ಮಾಡುವ ವಿಧಾನ
ಮೊದಲಿಗೆ ಕರ್ನಾಟಕ ಸೆಕೆಂಡರಿ ಎಜುಕೇಷನ್ ಎಕ್ಸಾಮಿನೇಷನ್ ಬೋರ್ಡ್ ಫಲಿತಾಂಶದ ಅಧಿಕೃತ ವೆಬ್‌ಸೈಟ್ karresults.nic.in ಗೆ ಭೇಟಿ ಡಬೇಕು. ಬಳಿಕ ವಿದ್ಯಾರ್ಥಿಗಳು ತಮ್ಮ ಎಸ್‌ಎಸ್‌ಎಲ್‌ಸಿ ರಿಜಿಸ್ಟರ್ ನಂಬರ್ ಮತ್ತು ಜನ್ಮ ದಿನಾಂಕದ ಮಾಹಿತಿ ನೀಡಿ, Submit ಎಂದು ಕ್ಲಿಕ್ ಮಾಡಿದರೆ ಫಲಿತಾಂಶ ಪುಟ ಓಪನ್ ಆಗುತ್ತದೆ. ಅದನ್ನ ಡೌನ್ ಲೋಡ್ ಮಾಡಿ ಬ್ಲ್ಯೂ ಪ್ರಿಂಟ್ ತೆಗೆದುಕೊಳ್ಳಬಹುದು. ಒಂದು ವೇಳೆ ವಿದ್ಯಾರ್ಥಿಗಳು ತಮ್ಮ ಫಲಿತಾಂಶಕ್ಕೆ ಅಸಮಾಧಾನಗೊಂಡಲ್ಲಿ, ಮರು ಮೌಲ್ಯಮಾಪನಕ್ಕೆ ಹಾಕಬಹುದು. ಮರುಪರೀಕ್ಷೆ ಬರೆಯಲು ಸಹ ಅವಕಾಶ ಇರುತ್ತದೆ.