SSLC ಪರೀಕ್ಷೆ ಬರೆಯಲು ತೆರಳುತ್ತಿದ್ದ ವಿದ್ಯಾರ್ಥಿ, ಮಸಣ ಸೇರಿದ
ತುಮಕೂರು: SSLC ಪರೀಕ್ಷೆ ಬರೆಯಲು ತೆರಳುತ್ತಿದ್ದ ವಿದ್ಯಾರ್ಥಿಯ ಬೈಕ್ ಅಪಘಾತ ಸಂಭವಿಸಿ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಅಮೃತೂರು ಬಳಿ ನಡೆದಿದೆ.
ನವೀನ್ ಮೃತ ವಿದ್ಯಾರ್ಥಿ. ವಿದ್ಯಾರ್ಥಿ ಇಂದು ನಡೆದ ಗಣಿತ ಪರೀಕ್ಷೆ ಬರೆಯಲು ಹೋಗುತ್ತಿರುವಾಗ, ಬೈಕ್ ನಿಯಂತ್ರಣ ತಪ್ಪಿ ಡಿವೈಡರ್ ಗೆ ಗುದ್ದಿದೆ. ಪರಿಣಾಮ ನವಿನ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇಬ್ಬರು ಗಾಯಗೊಂಡಿದ್ದಾರೆ.
ವಿದ್ಯಾರ್ಥಿ ನವೀನ್ ಡಾ. ರಾಜೇಂದ್ರಪ್ರಸಾದ್ ಹೈಸ್ಕೂಲ್ನಲ್ಲಿ ವ್ಯಾಸಾಂಗ ಮಾಡುತ್ತಿದ್ದರು. ಇಂದು ನಡೆದ ಗಣಿತ ಪರೀಕ್ಷೆ ಹಿನ್ನಲೇ ಒಂದೇ ಬೈಕನ್ ನಲ್ಲಿ 3 ಜನ ವಿದ್ಯಾರ್ಥಿಗಳು ಅಮೃತೂರು ಪರೀಕ್ಷಾ ಕೇಂದ್ರಕ್ಕೆ ತೆರಳುತ್ತಿದ್ದರು. ಆಗ ಬೈಕ್ ನ ನಿಯಂತ್ರ ತಪ್ಪಿ ಡಿವೈಡರ್ ಗೆ ಗುದ್ದಿದ್ದಾರೆ. ಪರಿಣಾಮ ನವೀನ್ ಸ್ಥಳದಲ್ಲೇ ಮೃತಪಟ್ಟಿದ್ದು, ಶರತ್, ದರ್ಶನ್ಗೆ ಗಂಭೀರವಾಗಿ ಗಾಯಗಳಾಗಿವೆ.
ಅಮೃತ್ತೂರು ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.









