ಡೆಹ್ರಾಡೂನ್: ಶಿಕ್ಷಕನೇ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಗೆ (SSLC Girl Student) ಲೈಂಗಿಕ ಕಿರುಕುಳ ನೀಡಿರುವ ಘಟನೆಯೊಂದು ನಡೆದಿದೆ.
ಈ ಘಟನೆ ಉತ್ತರಾಖಂಡದ (Uttarakhand) ಹಲ್ದ್ವಾನಿಯಲ್ಲಿ ನಡೆದಿದೆ. ತನ್ನ ಶಾಲೆಯ ಶಿಕ್ಷಕನೇ ತನಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾನೆ. ವಾಟ್ಸಪ್ ಮತ್ತು ಸ್ನ್ಯಾಪ್ ಚಾಟ್ ನಲ್ಲಿ ತನಗೆ ಬೆತ್ತೆಲೆ ಫೋಟೋ ಕಳುಹಿಸಿದ್ದಾನೆ ಎಂದು ಬಾಲಕಿ ಆರೋಪಿಸಿದ್ದಾರೆ. ಬಾಲಕಿಯ ಆರೋಪದ ಹಿನ್ನೆಲೆಯಲ್ಲಿ ಪಾಲಕರು ಪೊಲೀಸರಿಗೆ ದೂರು ನೀಡಿದ್ದಾರೆ.
ಹಲ್ದ್ವಾನಿ ವೃತ್ತ ನಿರೀಕ್ಷಕ ನಿತಿನ್ ಲೋಹಾನಿ ಈ ಕುರಿತು ಮಾಹಿತಿ ನೀಡಿದ್ದು, ಹಲ್ದ್ವಾನಿಯ ಖಾಸಗಿ ಶಾಲೆಯೊಂದರ ಶಿಕ್ಷಕನೊಬ್ಬ ಸಾಮಾಜಿಕ ಜಾಲತಾಣದ ಮೂಲಕ ವಿದ್ಯಾರ್ಥಿನಿಗೆ ಅಶ್ಲೀಲ ಸಂದೇಶಗಳನ್ನ ಕಳಿಸಿದ್ದಾನೆ. ಈ ಬಗ್ಗೆ ದೂರು ಸ್ವೀಕರಿಸಿ, ಎಫ್ ಐಆರ್ ದಾಖಲಿಸಲಾಗಿದೆ. ಆರೋಪಿ ತಲೆ ಮರೆಸಿಕೊಂಡಿದ್ದು, ಬಂಧಿಸುವುದಾಗಿ ಹೇಳಿದ್ದಾರೆ.
ಖಾಸಗಿ ಶಾಲೆಯ ಶಿಕ್ಷಕ, ತನ್ನ ವಿದ್ಯಾರ್ಥಿನಿಗೆ ಆಗಾಗ್ಗೆ ಕಿರುಕುಳ ನೀಡಲು ಶುರು ಮಾಡಿದ್ದಾನೆ. ಆಕೆಗೆ ಅನುಚಿತ ಸಂದೇಶಗಳನ್ನು ಕಳಿಸಿದ್ದಾನೆ. ಮೆಸೇಜ್ ಜೊತೆಗೆ ಸ್ನ್ಯಾಪ್ ಚಾಟ್ ಮತ್ತು ವಾಟ್ಸಪ್‌ಗಳಲ್ಲಿ ತನ್ನ ಬೆತ್ತಲೆ ಫೋಟೋಗಳನ್ನ ವಿದ್ಯಾರ್ಥಿನಿಗೆ ಕಳಿಸಿದ್ದಾನೆ ಎನ್ನಲಾಗಿದೆ.








