ಬೆಳಗಾವಿ: ಇಂದಿನಿಂದ ರಾಜ್ಯಾದ್ಯಂತ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ಕೊರೊನಾ ಭೀತಿಯ ನಡುವೆಯೇ ಆರಂಭವಾಗಿವೆ. ಆದರೆ, ಪರೀಕ್ಷೆಗೆ ಹೆದರಿದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ನಗರದ ವಡಗಾವಿಯಲ್ಲಿ ನಡೆದಿದೆ.
ನಗರದ ವಡಗಾವಿ ಪ್ರದೇಶದ ಕಲ್ಮೇಶ್ವರ ರಸ್ತೆಯ ಸುಜಾತ ಸುಭಾಷ್ ಡಗೆ ಎಂಬ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ. ಕೊರೊನಾದಿಂದಾಗಿ ಪರೀಕ್ಷೆ ರದ್ದಾಗಬಹುದೆಂಬ ನಿರೀಕ್ಷೆಯಲ್ಲಿದ್ದ ಬಾಲಕಿ ನಿನ್ನೆ ತಡರಾತ್ರಿಯವರೆಗೂ ಕಾದು ನೋಡಿದ್ದಾರೆ. ಆದರೆ ಪರೀಕ್ಷೆ ನಡೆದೇ ನಡೆಯುತ್ತದೆ ಎಂದು ಖಾತ್ರಿಯಾದ ಬಳಿಕ ನಿನ್ನೆ ರಾತ್ರಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ. ವಿದ್ಯಾರ್ಥಿನಿ ಆತ್ಮಹತ್ಯೆಗೂ ಮುನ್ನ ಡೆತ್‍ನೋಟ್ ಬರೆದಿದ್ದಾಳಾ ಇಲ್ಲವಾ ಎಂಬುದು ಇನ್ನೂ ಖಚಿತವಾಗಿಲ್ಲ. ಶಹಾಪುರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಶ್ರೀ ಲಕ್ಷ್ಮೀದೇವಿ ದೇವಸ್ಥಾನ ಮಳಲಿ, ಹಾಸನ ಇತಿಹಾಸ ಮತ್ತು ಮಹಿಮೆ
ಕರ್ನಾಟಕದ ಹಾಸನ ಜಿಲ್ಲೆಯ ಮಳಲಿ ಗ್ರಾಮದಲ್ಲಿರುವ ಶ್ರೀ ಲಕ್ಷ್ಮೀದೇವಿ ದೇವಸ್ಥಾನವು ತನ್ನ ಐತಿಹಾಸಿಕ ಹಿನ್ನಲೆ, ವಾಸ್ತುಶಿಲ್ಪದ ಸೌಂದರ್ಯ ಮತ್ತು ಭಕ್ತರ ಪಾಲಿನ ಶ್ರದ್ಧಾ ಕೇಂದ್ರವಾಗಿ ಮಹತ್ವ ಪಡೆದಿದೆ....