ನಾಳೆಯಿಂದ SSLC ಪೂರಕ ಪರೀಕ್ಷೆ ಪ್ರಾರಂಭ…
ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ ನಡೆಸುವ SSLC ಪೂರಕ ಪರೀಕ್ಷೆಗಳು ನಾಳೆಯಿಂದ ಅಂದ್ರೆ ಜೂನ್ 27ರಿಂದ ಜುಲೈ 4 ರವರೆಗೆ ನಡೆಯಲಿವೆ. ಪರೀಕ್ಷೆಗೆ ಈ ಬಾರಿ 94,649 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ರಾಜ್ಯದ 423 ಕೇಂದ್ರಗಳಲ್ಲಿ ಪೂರಕ ಪರೀಕ್ಷೆ ನಡೆಯಲಿದೆ.
ಕೋವಿಡ್ 4ನೇ ಅಲೆ ಆತಂಕದ ಹಿನ್ನೆಲೆ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಕಟ್ಟುನಿಟ್ಟಾಗಿ ಕೋವಿಡ್ ನಿಯಮಗಳನ್ನು ಪಾಲಿಸುವಂತೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದೆ.
SSLC ಪೂರಕ ಪರೀಕ್ಷೆ ವೇಳಾಪಟ್ಟಿ
ಜೂನ್ 27 : ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ ಸಂಗೀತ, ಹಿಂದುಸ್ತಾನಿ ಸಂಗೀತ
ಜೂನ್ 28 : ಪ್ರಥಮ ಭಾಷೆ ಕನ್ನಡ, ತೆಲುಗು, ಇಂಗ್ಲಿಷ್, ಮರಾಠಿ, ಉರ್ದು, ಸಂಸ್ಕೃತ
ಜೂನ್ 29 : ದ್ವೀತಿಯ ಭಾಷೆ (ಇಂಗ್ಲಿಷ್- ಕನ್ನಡ)
ಜೂನ್ 30 : ಸಮಾಜಶಾಸ್ತ್ರ
ಜುಲೈ 1 : ತೃತೀಯ ಭಾಷೆ (ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು)
ಜುಲೈ 2 : ಎಲಿಮೆಂಟ್ ಆಫ್ ಮೆಕಾನಿಕಲ್ ಮತ್ತು ಎಲೆಕ್ಟ್ರಿಲ್ ಇಂಜಿನಿಯರಿಂಗ್-2, ಇಂಜಿನಿಯರಿಂಗ್ ಗ್ರಾಫಿಕ್ಸ್ 2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್, ಅರ್ಥಶಾಸ್ತ್ರ
ಜುಲೈ 4 : ಗಣಿತ, ಸಮಾಜಶಾಸ್ತ್ರ
ಕಳೆದ ಮೇ 19ರಂದು ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟವಾಗಿತ್ತು. ಈ ಬಾರಿ ಶೇ.85.63ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಶೇ. 90.29ರಷ್ಟು ಬಾಲಕಿಯರು, ಶೇ. 81.30ರಷ್ಟು ಬಾಲಕರು ಪಾಸ್ ಆಗಿದ್ದರು.








