SSLC ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ – ಜೂನ್ 27 ರಿಂದ ಜುಲೈ 4 ರವರೆಗೆ ಪರೀಕ್ಷೆ..
2022ನೇ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಈಗಾಗಲೇ ಪ್ರಕಟವಾಗಿದೆ. ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ನಡೆಸುವ ಪೂರಕ ಪರೀಕ್ಷೆಯ ವೇಳಾಪಟ್ಟಿ ದಿನಾಂಕವನ್ನ ಕರ್ನಾಟಕ ಪ್ರೌಡ ಶಿಕ್ಷಣಾ ಮಂಡಳಿ ಇಂದು ಪ್ರಕಟಿಸಿದೆ.
ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿಯು 2021-22ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯನ್ನ ಜೂನ್ 27 ರಿಂದ ಜುಲೈ 4ರ ವರಗೆ ನಡೆಸಲು ನಿರ್ಧರಿಸಿದೆ. ಪೂರಕ ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ವಿದ್ಯಾರ್ಥಿಗಳು ತಮ್ಮ ತಮ್ಮ ಶಾಲೆಗಳಲ್ಲಿ ಪ್ರವೇಶ ಪತ್ರವನ್ನು ಪಡೆಯಬಹುದಾಗಿದೆ.
ಕಳೆದ ಮೇ 19ರಂದು ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟವಾಗಿತ್ತು. ಈ ಬಾರಿ ಶೇ.85.63ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಶೇ. 90.29ರಷ್ಟು ಬಾಲಕಿಯರು, ಶೇ. 81.30ರಷ್ಟು ಬಾಲಕರು ಪಾಸ್ ಆಗಿದ್ದರು.
SSLC ಪೂರಕ ಪರೀಕ್ಷೆ ವೇಳಾಪಟ್ಟಿ
ಜೂನ್ 27 : ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ ಸಂಗೀತ, ಹಿಂದುಸ್ತಾನಿ ಸಂಗೀತ
ಜೂನ್ 28 : ಪ್ರಥಮ ಭಾಷೆ ಕನ್ನಡ, ತೆಲುಗು, ಇಂಗ್ಲಿಷ್, ಮರಾಠಿ, ಉರ್ದು, ಸಂಸ್ಕೃತ
ಜೂನ್ 29 : ದ್ವೀತಿಯ ಭಾಷೆ (ಇಂಗ್ಲಿಷ್- ಕನ್ನಡ)
ಜೂನ್ 30 : ಸಮಾಜಶಾಸ್ತ್ರ
ಜುಲೈ 1 : ತೃತೀಯ ಭಾಷೆ (ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು)
ಜುಲೈ 2 : ಎಲಿಮೆಂಟ್ ಆಫ್ ಮೆಕಾನಿಕಲ್ ಮತ್ತು ಎಲೆಕ್ಟ್ರಿಲ್ ಇಂಜಿನಿಯರಿಂಗ್-2, ಇಂಜಿನಿಯರಿಂಗ್ ಗ್ರಾಫಿಕ್ಸ್ 2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್, ಅರ್ಥಶಾಸ್ತ್ರ
ಜುಲೈ 4 : ಗಣಿತ, ಸಮಾಜಶಾಸ್ತ್ರ








