ಬೆಂಗಳೂರು : ಆಪ್ತ ಸಹಾಯಕನಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆ ಸಚಿವ ಎಸ್.ಟಿ ಸೋಮಶೇಖರ್ ಅವರು ಹೋಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ. ಸಚಿವರು ಒಂದು ವಾರದ ಕಾಲ ಕ್ವಾರಂಟೈನ್ ನಲ್ಲಿ ಇರಲಿದ್ದು,ಅವರ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ. ಅಲ್ಲದೆ 7 ದಿನಗಳ ಕಾಲ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ.
“ಸಹಕಾರ ಸಚಿವರ ನೆಲ ಮಹಡಿ ಕೊಠಡಿ ಸಂಖ್ಯೆ 38-39 ರಲ್ಲಿ ಆಪ್ತ ಸಿಬ್ಬಂದಿಯೊಬ್ಬರಿಗೆ ಕೊರೋನಾ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಕಚೇರಿಯನ್ನು ಸ್ಯಾನಿಟೈಸ್ ಮಾಡಲಾಗುವುದು. ಈ ಹಿನ್ನೆಲೆಯಲ್ಲಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಹೋಂಕ್ವಾರಂಟೇನ್ ಗೆ ಒಳಗಾಗಲಿದ್ದಾರೆ. ಅಲ್ಲದೆ ಇಂದಿನಿಂದ 7 ದಿನಗಳ ಕಾಲ ಸಾರ್ವಜನಿಕ ಪ್ರವೇಶವನ್ನು ಸಹ ನಿರ್ಬಂಧಿಸಲಾಗಿದೆ” ಎಂದು ಸಚಿವಾಲಯದಿಂದ ಪ್ರಕಟಣೆ ಹೊರಡಿಸಲಾಗಿದೆ.








